24.5 C
Karnataka
Thursday, April 30, 2026

ಅಸಂಘಟಿತ ಕಾರ್ಮಿಕರ ಉಚಿತ ನೋಂದಣಿ

ಮಂಗಳೂರು: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 18 ರಿಂದ 60 ವರ್ಷದೊಳಗಿನ 101 ವರ್ಗಗಳ ಅಸಂಘಟಿತ ಕಾರ್ಮಿಕರು ಹಾಗೂ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ಯೋಜನೆಯಡಿ 18 ರಿಂದ 60 ವರ್ಷದೊಳಗಿನ ಖಾಸಗಿ ವಾಣಿಜ್ಯ ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್, ಗ್ಯಾರೇಜ್ ಕಾರ್ಮಿಕರು ಹಾಗೂ ಮೋಟಾರು ಸಾರಿಗೆಗೆ ಸಂಬಂಧಿಸಿದಂತೆ ಕೆಲಸ ನಿರ್ವಹಿಸುವ ಇನ್ನಿತರ ಕಾರ್ಮಿಕರನ್ನು ಮಂಡಳಿ ವೆಬ್‍ಸೈಟ್ ತಿತಿತಿ.ಞsuತಿssb.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಆನ್‍ಲೈನ್ ಮೂಲಕ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಅಥವಾ ಕಾರ್ಮಿಕ ಇಲಾಖೆಯ ತಾಲೂಕು ಮತ್ತು ಜಿಲ್ಲಾ ಮಟ್ಟದ ಕಛೇರಿಗಳಲ್ಲಿ ನೋಂದಾಯಿಸಿಕೊಳ್ಳಬಹುದು.
ಫಲಾನುಭವಿಗಳು ಉಚಿತವಾಗಿ ನೋಂದಾಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್‍ಗಳನ್ನು ಪಡೆಯಬಹುದಾಗಿದೆ. ಯಾವುದೇ ಹೆಚ್ಚಿನ ಶುಲ್ಕ ಭರಿಸುವ ಅವಶ್ಯಕತೆ ಇರುವುದಿಲ್ಲ. ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರಿಗೆ ರೂ. 50 ನ್ನ್ನು ಮೂರು ವರ್ಷಗಳ ಅವಧಿಗೆ ನೋಂದಾಣಿ ಶುಲ್ಕ ಪಾವತಿಸಬೇಕಾಗಿರುತ್ತದೆ.
ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ದೊರಕುವ ಸೌಲಭ್ಯಗಳು:- ಅಪಘಾತ ಪರಿಹಾರ ಸೌಲಭ್ಯ, ಮರಣ ರೂ.1.ಲಕ್ಷದವರೆಗೆ, ಸಹಜ ಮರಣ ರೂ.10,000 ವರೆಗೆ, ಆಸ್ಪತ್ರೆ ವೆಚ್ಚ (ಅಪಘಾತ ಪ್ರಕರಣಗಳಲ್ಲಿ ) ರೂ.50,000 ವರೆಗೆ
ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಮಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ಯೋಜನೆಯಡಿ ದೊರಕುವ ಸೌಲಭ್ಯಗಳು:- ಅಪಘಾತದಿಂದ ಚಾಲಕರು, ನಿರ್ವಹಕರು ಹಾಗೂ ಕ್ಲೀನರ್‍ಗಳು ಮರಣ ಹೊಂದಿದಲ್ಲಿ ಅವರ ನಾಮನಿರ್ದೇಶಿತರಿಗೆ ರೂ.5 ಲಕ್ಷ ಪರಿಹಾರ, ಸಹಜ ಮರಣ ಪರಿಹಾರ, ಅಂತ್ಯಸಂಸ್ಕಾರ ವೆಚ್ಚ ರೂ.25,000, ಶಾಶ್ವತ ದುರ್ಬಲತೆಗೆ ರೂ.2 ಲಕ್ಷದವರೆಗೆ ಪರಿಹಾರ, ತಾತ್ಕಲಿಕ ದುರ್ಬಲತೆಗೆ ರೂ 1 ಲಕ್ಷದ ವರೆಗೆ ಆಸ್ಪತ್ರೆ ವೆಚ್ಚ ಮರುಪಾವತಿ, ಶೈಕ್ಷಣಿಕ ಧನಸಹಾಯ – ಅಪಘಾತದ ಕಾರಣ ನಿಧಾನರಾದ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗಳ ಇಬ್ಬರು ಮಕ್ಕಳಿಗೆ ಪದವಿಪೂರ್ವ ವ್ಯಾಸಾಂಗದವರೆಗೆ ವಾರ್ಷಿಕ 10,000 ರೂ.ಗಳ ಶೈಕ್ಷಣಿಕ ಧನಸಹಾಯ, ನೋಂದಾಯಿತ ಫಲಾನುಭವಿಯ ಗರಿಷ್ಠ ಇಬ್ಬರು ಮಕ್ಕಳಿಗೆ 12ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ಶೈಕ್ಷಣಿಕ ಧನಸಹಾಯ.
ನೋಂದಣಿ ಮತ್ತು ಸೌಲಭ್ಯಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಗರದ ಯೆಯ್ಯಾಡಿ ಕಾರ್ಮಿಕ ಭವನದ ಕಾರ್ಮಿಕ ಅಧಿಕಾರಿಯವರ ಕಛೇರಿ (ದೂರವಾಣಿ ಸಂಖ್ಯೆ: 08242437479) ಅಥವಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರುಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles