ಮಂಗಳೂರು: ಮೈ ಜಿ ಪ್ಯೂಚರ್ ಕಂಪೆನಿ ಹಾಗೂ ಅಕ್ಷಯ ಪಾತ್ರಾ ಪೌಂಡೇಶನ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಬ್ಯುಸಿನೆಸ್ ಮ್ಯಾನೇಜರ್, ಕ್ಯಾಟಗರಿ ಬ್ಯುಸಿನೆಸ್ ಮ್ಯಾನೇಜರ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಶೋ ರೂಮ್ ಸೇಲ್ಸ್, ಕಸ್ಟಮರ್ ಸರ್ವೀಸ್/ಡಿಲೈಟ್ ಎಕ್ಸಿಕ್ಯೂಟಿವ್, ಎಕ್ಸಿಕ್ಯೂಟಿವ್ ಡಿಸ್ಪಾಚ್ ಹಾಗೂ ಡ್ರೈವರ್, ಪ್ರೋಡಕ್ಷನ್ ಹೆಲ್ಪರ್ ಮತ್ತು ಅಡುಗೆ ಕೆಲಸಗಾರರು (ಕುಕ್) ಹುದ್ದೆಗಳಿಗೆ ನೇರ ಸಂದರ್ಶನವನ್ನು ಏಪ್ರಿಲ್ 22 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1-30 ರವರೆಗೆ ಪಡೀಲ್ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಸಂದರ್ಶನದಲ್ಲಿ ಎಸ್.ಎಸ್.ಎಲ್.ಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


