ಎಪ್ರಿಲ್ 24 : ಮಹಾನಗರಪಾಲಿಕೆಯಲ್ಲಿ ಡಿಸಿ ನೇರ ಫೋನ್ ಇನ್
ಮಂಗಳೂರು: ಮಹಾನಗರಪಾಲಿಕೆಯ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು ಎಪ್ರಿಲ್ 24 ರಂದು ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ಮಹಾನಗರಪಾಲಿಕೆಯಆಡಳಿತಾಧಿಕಾರಿಯವರ ಕೊಠಡಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.
ಸಾರ್ವಜನಿಕರು ದೂರವಾಣಿ ಸಂಖ್ಯೆ 0824-2220301 ಅಥವಾ 0824-2220309 ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


