ಮಂಗಳೂರು: ಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪ್ರೋಗ್ರಾಮಿಂಗ್ & ಸಿಸ್ಟಮ್ ಎಡ್ಮಿನಿಸ್ಟ್ರೇಟಿವ್ ಎಸಿಸ್ಟೆಂಟ್ ವೃತ್ತಿಗಳಲ್ಲಿ ಪಾಸಾದವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಎಪ್ರಿಲ್ 21 ರಿಂದ ಮೇ 8 ರೊಳಗಾಗಿ ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ಕಛೇರಿಗೆ ಅರ್ಜಿ ಸಲ್ಲಿಸಬೇಕು. ಮೇ 12 ರಂದು
ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


