24.9 C
Karnataka
Thursday, April 30, 2026

ಮಳೆಗಾಲಕ್ಕೆ ಸಿದ್ದತೆ: ಪೂರ್ವಭಾವಿ ಸಭೆ

ಮಂಗಳೂರು : ಮುಂಬರಲಿರುವ ಮಳೆಗಾಲದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅವಘಡಕ್ಕೆ ಆಸ್ಪದವಿಲ್ಲದಂತೆ ಸಕಲ ಸಿದ್ದತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಪಾಲಿಕೆಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯು ನಡೆಯಿತು.

ಕಳೆದ ಮಳೆಗಾಲದಲ್ಲಿ ಮ.ನ.ಪಾ ವ್ಯಾಪ್ತಿಯ ಹಲವೆಡೆ ಅಪಾರ ಪ್ರಮಾಣದ ಹಾನಿಯುಂಟಾಗಿದ್ದನ್ನು ಗಮನದಲ್ಲಿಟ್ಟುಕೊಂಡು ನೆರೆ ಪರಿಸ್ಥಿತಿಗೆ ಕಾರಣ, ಪ್ರವಾಹ ಮರುಕಳಿಸದಂತೆ ತುರ್ತಾಗಿ ನಡೆಯಬೇಕಿರುವ ಕಾರ್ಯ ಇತ್ಯಾದಿ ವಿಷಯಗಳ ಬಗ್ಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ರಾಜಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿದು ಹೋಗುವಂತೆ ಕ್ರಮ ವಹಿಸುವುದು, ಅಗತ್ಯವಿರುವೆಡೆ ಹೂಳೆತ್ತುವುದು, ವಿಶೇಷವಾಗಿ ಪಂಪ್ ವೆಲ್ ಹಾಗೂ ಪಡೀಲ್ ರೈಲ್ವೆ ಅಂಡರ್ ಪಾಸ್ ಬಳಿ ನೀರು ಶೇಖರಣೆಗೊಳ್ಳದಂತೆ ಮತ್ತು ಸಂಭಾವ್ಯ ಗುಡ್ಡಕುಸಿತದ ಭಾಗಗಳನ್ನು ಗುರುತಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಶಾಸಕರು ಸೂಚನೆ ನೀಡಿದರು.

ಸಭೆಯಲ್ಲಿ ಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್, ಉಪ ಆಯುಕ್ತರಾದ ನರೇಶ್ ಶೆಣೈ, ತಹಶೀಲ್ದಾರ್ ರಮೇಶ್ ಬಾಬು ಸೇರಿದಂತೆ ಪಾಲಿಕೆಯ ಹಿರಿಯ ಅಧಿಕಾರಿಗಳು, ಮೆಸ್ಕಾಂ, ಅರಣ್ಯ, ಕಂದಾಯ, ಅಗ್ನಿಶಾಮಕ ಮೊದಲಾದ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles