24.9 C
Karnataka
Thursday, April 30, 2026

ಗ್ರಾ.ಪಂ ಸದಸ್ಯ ಸ್ಥಾನಗಳ ನಿಗದಿ: ಆಕ್ಷೇಪಣೆ ವಿಸ್ತರಣೆ

ಮಂಗಳೂರು: ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ ಸ್ಥಾನಗಳನ್ನು ಪ್ರಕರಣ 5(1) ರಂತೆ ನಿಗದಿಪಡಿಸಿ ಎಪ್ರಿಲ್ 18 ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಹೊರಡಿಸಲಾದ ಕರಡು ಪ್ರಕಟಣೆಗೆ ಸಾರ್ವಜನಿಕರು ಆಕ್ಷೇಪಣೆಯನ್ನು ಸಲ್ಲಿಸುವ ಅವಧಿಯನ್ನು ಮೇ 2 ರ ಸಂಜೆ 5:30 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಈಗಾಗಲೇ ಸ್ವೀಕರಿಸಿದ ಆಕ್ಷೇಪಣೆ/ಅಹವಾಲುಗಳ ಬಗ್ಗೆ ನಿಗದಿಪಡಿಸಿದ ದಿನಾಂಕ: 27-04-2026 ಪರಿಶೀಲನಾ ಅದಾಲತನ್ನು ಮುಂದೂಡಲಾಗಿದೆ.
ಪರಿಶೀಲನಾ ಅದಾಲತ್‍ನ ವೇಳಾಪಟ್ಟಿ:
ಮೇ 5 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1:30 ರವರೆಗೆ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ವಿಜಯಪುರ, ಹಾವೇರಿ ಮತ್ತು ಉತ್ತರಕನ್ನಡ ಜಿಲ್ಲೆ ಭಾಗವಹಿಸಬಹುದು.
ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಭಾಗವಹಿಸಬಹುದು.
ಅದಾಲತ್ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2 ನೇ ಮಹಡಿಯಲ್ಲಿ ನಡೆಯಲಿದೆ. ಆಕ್ಷೇಪಣೆ ಮತ್ತು ಅಹವಾಲುಗಳನ್ನು ಸಲ್ಲಿಸಿದವರು ಅದಾಲತ್‍ನಲ್ಲಿ ಭಾಗವಹಿಸಲು ಇಚ್ಛಿಸಿದಲ್ಲಿ, ತಮ್ಮ ಆಧಾರ್ ಅಥವಾ ಗುರುತಿನ ಚೀಟಿ ಅಥವಾ ಸರ್ಕಾರದಿಂದ ನೀಡಿರುವ ಭಾವಚಿತ್ರವುಳ್ಳ ಯಾವುದೇ ಗುರುತಿನ ಚೀಟಿಯ ಪ್ರತಿಯನ್ನು ಕಡ್ಡಾಯವಾಗಿ ತರಬೇಕು ಎಂದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles