24.9 C
Karnataka
Thursday, April 30, 2026

ಪಿಲಿಕುಳದಲ್ಲಿ ಶೂನ್ಯ ನೆರಳಿನ ಪ್ರಾತ್ಯಕ್ಷಿಕೆ

ಮಂಗಳೂರು: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ಶೂನ್ಯ ನೆರಳಿನ ವಿದ್ಯಮಾನವನ್ನು ವೀಕ್ಷಿಸಲು ಹಾಗೂ ಅದರ ಹಿಂದಿನ ವಿಜ್ಞಾನವನ್ನು ತಿಳಿಯಲು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವಿದ್ಯಮಾನದ ಬಗ್ಗೆ ವಿವರಣೆಯನ್ನು ಮತ್ತು ಅದಕ್ಕೆ ಸಂಬಂಧಪಟ್ಟ ಪ್ರಾತ್ಯಕ್ಷಿಕೆಗಳನ್ನು ಆಸಕ್ತ ಸಂದರ್ಶಕರಿಗೆ ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಅಡ್ಯಾರ್ ಕೇಂಬ್ರಿಡ್ಜ್ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಭಾಗವಹಿಸಿ, ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿದರು. ವೀಕ್ಷಕರಿಗೆ ಸೋಲಾರ್ ಫಿಲ್ಟರ್ ಅಳವಡಿಸಿದ ದೂರದರ್ಶಕದ ಮೂಲಕ ಸೂರ್ಯನ ಸೌರಕಲೆಗಳನ್ನು ವೀಕ್ಷಿಸಲು ಅನುವು ಮಾಡಿಕೊಡಲಾಯಿತು.
ಬೆಂಗಳೂರಿನ ಜವಾಹರ್‍ಲಾಲ್ ನೆಹರು ತಾರಾಲಯ, ಚೆನ್ನೈನ ಪೆರಿಯಾರ್ ವಿಜ್ಞಾನ ಮತ್ತು ತಂತ್ರಜ್ಞಾನ ಮ್ಯೂಸಿಯಂ ಮತ್ತು ಇನ್ನಿತರ ಕೇಂದ್ರಗಳ ಸಮನ್ವಯತೆಯೊಂದಿಗೆ ಭೂಮಿಯ ಸುತ್ತಳತೆ, ಭೂಮಿ ತಿರುಗುವ ವೇಗ ಮತ್ತು ನಿಜ ಉತ್ತರ ದಿಕ್ಕುಗಳನ್ನು ಕಂಡುಹಿಡಿಯುವ ಪ್ರಯೋಗಗಳನ್ನು ಕೈಗೊಳ್ಳಲಾಗಿತ್ತು.
ಕೇಂದ್ರದ ಕ್ಯುರೇಟರ್ ಜಗನ್ನಾಥ್, ವೈಜ್ಞಾನಿಕ ಅಧಿಕಾರಿ ವಿಘ್ನೇಶ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು ಹಾಗೂ ಕೇಂದ್ರದ ಸಿಬ್ಬಂದಿ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸುವಲ್ಲಿ ಸಹಕರಿಸಿದರು ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles