26.6 C
Karnataka
Sunday, May 17, 2026

ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುವಾಗ ತಾಯಿ ಕಾರ್ಡ್ ಕಡ್ಡಾಯವಾಗಿ ಪಡೆಯಲು ಡಿ.ಎಚ್.ಒ ಸೂಚನೆ

ಮಂಗಳೂರು: ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುವಾಗ ತಾಯಿ ಕಾರ್ಡ್ ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಆರ್ ತಿಮ್ಮಯ್ಯ ಸೂಚಿಸಿದ್ದಾರೆ.
ಅವರು ಶುಕ್ರವಾರ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆದ ಜನನ ಪೂರ್ವ ಲಿಂಗ ನಿರ್ಣಯ (ನಿಬರ್ಂಧ ಮತ್ತು ದುರ್ಬಳಕೆ) ತಡೆ ಕಾಯಿದೆ 1994 ಕ್ಕೆ ಸಂಬಂಧಿಸಿ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸಭೆಯಲ್ಲಿ ಮಾತನಾಡಿದರು.
18-19 ವರ್ಷದೊಳಗಿನ ಬಾಲ ಗರ್ಭಿಣಿಯರು ಕಂಡುಬಂದಲ್ಲಿ, ಅವರ ಗರ್ಭಧಾರಣೆಯ ದಿನಾಂಕವನ್ನು ಮತ್ತು ವಯಸ್ಸಿನ ದೃಢೀಕರಣವನ್ನು ಖಚಿತಪಡಿಸಿಕೊಳ್ಳಬೇಕು. ಅಪ್ರಾಪ್ತ ವಯಸ್ಸಿನ ಗರ್ಭಧಾರಣೆ ಕಾನೂನು ಬಾಹಿರವಾಗಿದ್ದು, ಇಂತಹ ಪ್ರಕರಣಗಳಲ್ಲಿ ಮೊದಲು ಪರೀಕ್ಷಿಸಿದವರು ಅಥವಾ ಸಂಸ್ಥೆಯ ಮುಖ್ಯಸ್ಥರು ತಕ್ಷಣವೇ ಪೋಲಿಸರಿಗೆ ಮಾಹಿತಿ ನೀಡುವಂತೆ ಡಿ.ಎಚ್.ಒ ಸೂಚಿಸಿದರು.
ಏಪ್ರಿಲ್ 2025 ರಿಂದ ಮಾರ್ಚ್ 2026 ರವರೆಗೆ ಖಾಸಗಿ 681 ಹಾಗೂ ಸರ್ಕಾರಿ 39 ಸ್ಕ್ಯಾನಿಂಗ್ ಸೆಂಟರ್‍ಗಳ ತಪಾಸಣೆ ನಡೆಸಲಾಗಿರುತ್ತದೆ. ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಖಾಸಗಿ 75 ಹಾಗೂ ಸರ್ಕಾರಿ 9 ಸ್ಕ್ಯಾನಿಂಗ್ ಸೆಂಟರ್‍ಗಳ ತಪಾಸಣೆ ನಡೆಸಲಾಗಿರುತ್ತದೆ. ಏಪ್ರಿಲ್ 2026 ರಿಂದ ಖಾಸಗಿ 53 ಹಾಗೂ ಸರ್ಕಾರಿ 6 ಸ್ಕ್ಯಾನಿಂಗ್ ಸೆಂಟರ್‍ಗಳ ತಪಾಸಣೆ ನಡೆಸಲಾಗಿರುತ್ತದೆ. ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಖಾಸಗಿ 5 ಹಾಗೂ ಸರ್ಕಾರಿ 1 ಸ್ಕ್ಯಾನಿಂಗ್ ಸೆಂಟರ್‍ಗಳ ತಪಾಸಣೆ ನಡೆಸಲಾಗಿರುತ್ತದೆ ಎಂದು ಜಿಲ್ಲಾ ಎನ್ ಫೋರ್ಸ್‍ಮೆಂಟ್ ಅಧಿಕಾರಿ ಡಾ.ದೀಪಾ ಪ್ರಭು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷೆ (ಪಿ.ಎನ್.ಡಿ.ಟಿ)ಡಾ.ಅಮೃತಾ ಭಂಡಾರಿ, ಜಿಲ್ಲಾ ತಪಾಸಣಾ & ಮೇಲ್ವಿಚಾರಣಾ ಸಮಿತಿ ಸದಸ್ಯೆ ಡಾ.ಸುಂದರಿ, ಡಾ.ಅನಿತ್‍ರಾಜ್, ಆರ್.ಸಿ.ಎಚ್ ಅಧಿಕಾರಿ ರಾಜೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles