ಮಂಗಳೂರು, ಜೂ.02 (ಕ.ವಾ):- ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್, ಮಂಗಳೂರು ಇಲ್ಲಿಡಿಪ್ಲೋಮಾ ಪ್ರವೇಶಕ್ಕೆ ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್‍ಫೆÇೀರ್‍ಮೇಶನ್ ಸೈನ್ಸ್ ಕೋರ್ಸ್‍ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಡಿಪ್ಲೋಮಾ ಕೋರ್ಸು ಸೇರಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್, ಮಂಗಳೂರು ಇವರನ್ನು ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ತಿಳಿಸಲಾಗಿದೆ.
ಅರ್ಜಿ ಪಡೆಯಲು ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಜೂನ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಕಛೇರಿಯ ದೂರವಾಣಿ ಸಂಖ್ಯೆ 0824-2482334/ 9611320910 / 9844744845ನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


