24 C
Karnataka
Thursday, June 4, 2026

ಸಕಾರಾತ್ಮಕ ಚಿಂತನೆಯಿಂದ ಮಾನಸಿಕ ಆರೋಗ್ಯ: ಸಿಎ ಶಾಂತಾರಾಮ ಶೆಟ್ಟಿ

ಮಂಗಳೂರು : ಸಾಮಾಜಿಕ ಜಾಲತಾಣಗಳ ಪ್ರಭಾವ, ಶೈಕ್ಷಣಿಕ ಒತ್ತಡ, ಬದಲಾಗುತ್ತಿರುವ ಜೀವನಶೈಲಿ ಸಹಿತ ಹಲವು ಕಾರಣಗಳಿಂದ ಹದಿಹರೆಯದವರು ಖಿನ್ನತೆಗೆ ಒಳಗಾಗುತ್ತಿದಾರೆ. ಹದಿಹರೆಯದವರ ಮಾನಸಿಕ ಆರೋಗ್ಯ ದೈಹಿಕ ಆರೋಗ್ಯದಷ್ಟೇ ಮುಖ್ಯ, ಆತ್ಮಸ್ಥೆರ್ಯ ಹಾಗೂ ಸಕಾರಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳುವ ಮೂಲಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ಇದರ ವತಿಯಿಂದ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಸಹಭಾಗಿತ್ವದಲ್ಲಿ ಸಮಾಲೋಚನೆ ಮತ್ತು ಹದಿಹರೆಯದ
ಮಾನಸಿಕ ಆರೋಗ್ಯ ಸರ್ಟಿಫಿಕೇಟ್ ಕೋರ್ಸ್ ಪೂರೈಸಿದ ದ್ವಿತೀಯ ಬ್ಯಾಚ್ ವಿದ್ಯಾರ್ಥಿಗಳಿಗೆ ಗುರುವಾರ ರೆಡ್‌ಕ್ರಾಸ್ ಸೊಸೈಟಿಯ ಪ್ರೇರಣಾ ಸಭಾಂಗಣದಲ್ಲಿ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.
ಯೂತ್ ರೆಡ್‌ಕ್ರಾಸ್ ನಿರ್ದೇಶಕಿ ಡಾ.ಸುಮನ ಬೋಳಾರ್ ಮಾತನಾಡಿ “ಹದಿಹರೆಯದಲ್ಲಿ ಕೆಲವು ಸಮಸ್ಯೆಗಳು ಸಾಮಾನ್ಯ. ಇವುಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಸೂಕ್ತ ಸಲಹೆ ನೀಡುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಬಹುದು. ಈ ನಿಟ್ಟಿನಲ್ಲಿ ಹದಿಹರೆಯದ ಮಾನಸಿಕ ಆರೋಗ್ಯ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಲಾಗಿದೆ ಎಂದರು.
ವಿದ್ಯಾರ್ಥಿನಿಯರಾದ ಸುಕನ್ಯಾ ಮತ್ತು ಶೋಭರಾಣಿ ಕೋರ್ಸ್ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಖಜಾಂಜಿ ಗುರುದತ್ ನಾಯಕ್, ನಿರ್ದೇಶಕರಾದ ಡಾ.ಸತೀಶ್ ರಾವ್, ಪಿ.ಬಿ.ಹರೀಶ್ ರೈ ಉಪಸ್ಥಿತರಿದ್ದರು. ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles