23.1 C
Karnataka
Thursday, July 30, 2026

ಆರ್.ಟಿ.ಓ ದಂಡ ಪಾವತಿ: ಶೇ.50 ರಿಯಾಯಿತಿ

ಮಂಗಳೂರು: ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50% ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ.
1991 ರಿಂದ 2022 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ (ಆರ್.ಟಿ.ಒ.)ಅಧಿಕಾರಿಗಳು ದಾಖಲಿಸಿರುವ ಪ್ರಕರಕಣಗಳು ಮಾತ್ರ ಶೇಕಡಾ 50% ರಷ್ಟು ದಂಡ ಪಾವತಿ ರಿಯಾಯಿತಿ ವ್ಯಾಪ್ತಿಗೆ ಒಳಪಡುತ್ತವೆ. ಮಂಗಳೂರು ಆರ್.ಟಿ.ಓ ಕಛೇರಿಯಲ್ಲಿ ಈ ಅವಧಿಯಲ್ಲಿ 2724 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿದ್ದು, ಸಂಬಂಧಪಟ್ಟ ವಾಹನ ಮಾಲೀಕರು ಜೂನ್ 21 ರಿಂದ ಜುಲೈ 10 ರೊಳಗೆ ರಿಯಾಯಿತಿ ಬಳಸಿಕೊಂಡು ದಂಡ ಪಾವತಿಸಿ ಪ್ರಕರಣ ಮುಕ್ತಾಯಗೊಳಿಸಿಕೊಳ್ಳಬಹುದು ಎಂದು ಮಂಗಳೂರು ಉಪಸಾರಿಗೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles