23.2 C
Karnataka
Thursday, June 11, 2026

ಶಾಲೆ ಮತ್ತು ಗ್ರಾಮಗಳ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಜಿ.ಪಂ ಸಿ.ಇ.ಒ ಸೂಚನೆ

ಮಂಗಳೂರು: ಅಂಗನವಾಡಿಗಳು, ಶಾಲಾ ಕಾಲೇಜುಗಳಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡಲು ನಿಯಮಿತವಾದ ನೀರಿನ ಪರೀಕ್ಷೆಯನ್ನು ಮಾಡಬೇಕು. ರೋಗಗಳು ಹರಡದಂತೆ ತಡೆಯಲು ನೀರಿನ ಮೂಲಗಳನ್ನು ನಿರಂತರವಾಗಿ ಪರೀಕ್ಷೆಗಳಿಗೆ ಒಳಪಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ಸೂಚಿಸಿದರು.
ಅವರು ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಟ್ಯಾಂಕ್ ಸ್ವಚ್ಛಗೊಳಿಸುವಿಕೆ ಅತ್ಯಂತ ಅತ್ಯಗತ್ಯವಾಗಿದ್ದು, ಶಾಲೆಗಳಲ್ಲಿನ ನೀರಿನ ಟ್ಯಾಂಕ್‍ಗಳನ್ನು ವಿಳಂಬ ಮಾಡದೆ ಕಾಲಕಾಲಕ್ಕೆ ಸ್ವಚ್ಛಗೊಳಿಸುವಂತೆ ಅವರು ತಿಳಿಸಿದರು.
ಜಲಜೀವನ್ ಮಿಷನ್ ಸೇರಿದಂತೆ ವಿವಿಧ ನೀರು ಸರಬರಾಜು ಯೋಜನೆಗಳ ಪ್ರಗತಿ ಪರಿಶೀಲಿಸಿದರು. ಬಾಕಿ ಇರುವ ಕಾಮಗಾರಿಗಳನ್ನು ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅವರು ನಿರ್ದೇಶಿಸಿದರು. ನೀರು ಸರಬರಾಜು ಕಾಮಗಾರಿಗಳನ್ನು ನಿರ್ವಹಿಸುವಲ್ಲಿ ಯಾವುದೇ ವಿಳಂಬ ಮಾಡಬಾರದು ಎಂದು ಹೇಳಿದರು.
ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿನ ನೀರಿನ ಟ್ಯಾಂಕ್‍ಗಳನ್ನು ಶುಚಿಗೊಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸಬೇಕು. ಪ್ರತಿಯೊಂದು ಕುಡಿಯುವ ನೀರಿನ ಮೂಲಗಳಿಂದ ಕಡ್ಡಾಯವಾಗಿ ನೀರಿನ ಮಾದರಿಗಳನ್ನು ಪರೀಕ್ಷೆ ಮಾಡಿಸಬೇಕು ಎಂದು ತಿಳಿಸಿದ್ದಾರೆ. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.
ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.


Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles