26.2 C
Karnataka
Friday, June 19, 2026

ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು : ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ

ಮ೦ಗಳೂರು : ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ 2026-27 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವು ಜೂ. 16 ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಅವರು ಮಾತನಾಡಿ, ‘ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುವುದು ಬಹಳ ಮುಖ್ಯ’ ಎಂದು ವಿವರಿಸಿದರು.
ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಝೈನ್ ಶೇಖ್ ಜಾಕಿರ್, ಉಪಾಧ್ಯಕ್ಷೆ ಸಿಂಚನ, ವಿವಿಧ ಕ್ಷೇತ್ರದ ಕಾರ್ಯದರ್ಶಿಗಳು ಮತ್ತು ಇತರ ಪದಾಧಿಕಾರಿಗಳಿಗೆ ಗಣ್ಯರು ಬ್ಯಾಡ್ಜ್ಗಳನ್ನು ವಿತರಿಸಿ ಗೌರವಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಮೆಲ್ವಿನ್ ವಾಸ್ ನೂತನ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.


ಅಧ್ಯಕ್ಷತೆ ವಹಿಸಿದ್ದ ಮಿಲಾಗ್ರಿಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರೂ ಆಗಿರುವ ಅತೀ. ವಂದನೀಯ ಗುರುಗಳಾದ ಐವನ್ ಮೈಕಲ್ ರೊಡ್ರಿಗಸ್ ಅವರು ವಿದ್ಯಾರ್ಥಿಗಳನ್ನು ಮಾತನಾಡಿ, “ವಿದ್ಯಾರ್ಥಿ ಜೀವನವು ಕೇವಲ ಶಿಕ್ಷಣಕ್ಕೆ ಸೀಮಿತವಾಗಿರದೆ, ಶಿಸ್ತು ,ನಾಯಕತ್ವ, ಸಮಯಪ್ರಜ್ಞೆ ಮತ್ತು ವ್ಯಕ್ತಿತ್ವ ವಿಕಸನವನ್ನು ರೂಢಿಸಿಕೊಳ್ಳುವ ಸುವರ್ಣಾವಕಾಶವಾಗಿದೆ” ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಕ್ಯಾಂಪಸ್ ನಿರ್ದೇಶಕರು ಹಾಗೂ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಅತೀ. ವಂದನೀಯ ಗುರುಗಳಾದ ಡಾ| ಆಲ್ವಿನ್ ಸೆರಾವೊ , ಮಿಲಾಗ್ರಿಸ್ ಸಿಬಿಎಸ್ಇ ಶಾಲೆಯ ಪ್ರಾಂಶುಪಾಲರು ವಂದನೀಯ ಗುರುಗಳಾದ ಉದಯ ಫೆರ್ನಾಂಡಿಸ್ , ಮಿಲಾಗ್ರಿಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಡಿಕ್ಸನ್ ಡಿಸೋಜಾ , ಕಾರ್ಯದರ್ಶಿ ಶ್ರೀಮತಿ ಜಸಿಂತಾ ಫೆರ್ನಾಂಡಿಸ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀಮತಿ ಲಿಡ್ವಿನ್ ಫೆರ್ನಾಂಡಿಸ್ ನಿರೂಪಿಸಿದರು. ಕಾರ್ಯಕ್ರಮದ ಸಂಯೋಜಕಿಯಾದ ಶ್ರೀಮತಿ ಶೆರಿಲ್ ಪಿಂಟೊ ಸ್ವಾಗತಿಸಿದರು .ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಝೈನ್ ಶೇಖ್ ಜಾಕಿರ್ ವ೦ದಿಸಿದರು.
. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು .ಕೊನೆಯಲ್ಲಿ ಕಾಲೇಜು ಗೀತೆಯೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles