ಮಂಗಳೂರು: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ಇಂಜಿನಿಯರಿಂಗ್ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2026-27ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ಡಿಸೆಂಬರ್ 31 ಕೊನೆಯ ದಿನ. ಕಾರ್ಮಿಕನÀ ಮಾಸಿಕ ವೇತನ 35,000 ರೂ.ಗಿಂತ ಮೀರಿರಬಾರದು. (ಒಂದು ಕುಟುಂಬದಲ್ಲಿ ಇಬ್ಬರು ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುತ್ತದೆ.)
ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾರ್ಥಿಗಳು ಆನ್ಲೈನ್ ಮುಖಾಂತರ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್ಸೈಟ್ www.klwbapps.karnataka.gov.in ಅರ್ಜಿ ಸಲ್ಲಿಸಬಹುದು. (ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ. 50, ಪ.ಜಾ/ಪ.ಪಂ. ಶೇ. 45ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು)
ಹೆಚ್ಚಿನ ಮಾಹಿತಿಗೆ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತೀಕೆರೆ ಮುಖ್ಯ ರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 080-23475188, 8277291175, 8277120505, 9141585402, 9141602562ಗೆ ಮೂಲಕ ಸಂಪರ್ಕಿಸಬಹುದು ಎಂದು ಕಾರ್ಮಿಕ ಇಲಾಖೆ ಪ್ರಕಟಣೆ ತಿಳಿಸಿದೆ.


