ಮಂಗಳೂರು: ಸಿರಿ ತೋಟಗಾರಿಕೆ ಸಂಘ (ರಿ) (ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆ), ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಆವರಣ, ಬೆಂದೂರು, ಮಂಗಳೂರು ಇದರ ವತಿಯಿಂದ ಕೈತೋಟ ತರಬೇತಿ ಕಾರ್ಯಕ್ರಮವನ್ನು ಜುಲೈ 28 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ರವರೆಗೆ ಬೆಂದೂರು ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಪಾಟಿಂಗ್, ರೀಪಾಟಿಂಗ್, ಕಸಿ ಕಟ್ಟುವುದು (ಗ್ರಾಪ್ಟಿಂಗ್, ಬಡ್ಡಿಂಗ್, ಲೇಯರಿಂಗ್), ಸಾವಯವ ಗೊಬ್ಬರ ತಯಾರಿ, ತಾರಸಿ ಕೃಷಿಯ ಕುರಿತು ತರಬೇತಿ ನೀಡಲಾಗುತ್ತದೆ. ಆಸಕ್ತರು ರೂ. 100 ಶುಲ್ಕ ಪಾವತಿಸಿ, ಜುಲೈ 24 ರ ಮುಂಚಿತವಾಗಿ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ 9845523944 ಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


