26.6 C
Karnataka
Thursday, November 21, 2024

ಅಸಂಘಟಿತ ಕಾರ್ಮಿಕರಿಗೆ ಅಪಘಾತ ಪರಿಹಾರ: ಅರ್ಜಿ ಅಹ್ವಾನ

ಮಂಗಳೂರು:ಕೇಂದ್ರ ಸರಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಡೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಪೋರ್ಟಲ್‍ನಲ್ಲಿ ನೋಂದಾಯಿಸಲಾಗುತ್ತಿದೆ. ದಿನಾಂಕ:26-08-2021 ರಿಂದ ದಿನಾಂಕ:31-03-2022 ರೊಳಗೆ ನೋಂದಣಿಯಾಗಿ ಮತ್ತು ಸದರಿ ದಿನಾಂಕದೊಳಗೆ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ 2 ಲಕ್ಷ ರೂ.ಗಳ ಅಪಘಾತ ಪರಿಹಾರವನ್ನು ಮಂಜೂರುಗೊಳಿಸಲು ಅಸಂಘಟಿತ ಕಾರ್ಮಿಕರಿಂದ ಅರ್ಜಿ ಅಹ್ವಾನಿಸಲಾಗಿದೆ.

ಅಪಘಾತದಿಂದ ಮರಣ ಹೊಂದಿದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆ. ಯುಎಎನ್ ಕಾರ್ಡ್(ಇ-ಶ್ರಮ್ ಕಾರ್ಡ್)ಸಂಖ್ಯೆ, ಮರಣ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ, ಎಫ್‍ಐಆರ್/ಪಂಚನಾಮೆ ಹಾಗೂ ಅಪಘಾತದಿಂದ ಅಂಗವೈಕಲ್ಯ ಹೊಂದಿದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆ, ಯುಎಎನ್ ಕಾರ್ಡ್ (ಇ-ಶ್ರಮ್ ಕಾರ್ಡ್) ಸಂಖ್ಯೆ, ಅಪಘಾತದಿಂದ ಉಂಟಾದ ಅಂಗವೈಕಲ್ಯವನ್ನು ಸೂಚಿಸುವ ಡಿಸ್ಚಾರ್ಜ್ ಸಾರಾಂಶ ಒಳಗೊಂಡ ಆಸ್ಪತ್ರೆಯ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಕಾರ್ಮಿಕ ಇಲಾಖೆ ಕಚೇರಿಯನ್ನು ಸಂಪರ್ಕಿಸಿ (ದೂ.ಸಂ: 0824-2435343, 0824-2433132) ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles