ಮಂಗಳೂರು: 2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಮಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 22ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ದ.ಕ.ಜಿಲ್ಲೆ, ಮಂಗಳೂರು ಹಾಗೂ ಜಿಲ್ಲಾ ಅಭಿವೃದ್ದಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಕಛೇರಿ ಜಿಲ್ಲಾ ಸ್ತ್ರೀ ಶಕ್ತಿ ಭವನ, 2ನೇ ಮಹಡಿ, ಮೆಸ್ಕಾಂ ಹತ್ತಿರ, ಬಿಜೈ ಮಂಗಳೂರು ದೂರವಾಣಿ ಸಂಖ್ಯೆ:9449510857 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.