20.5 C
Karnataka
Friday, November 15, 2024

ಸಹಕಾರ ಸಂಘಗಳ ಹಾಗೂ ನವೋದಯ ಸ್ವ-ಸಹಾಯ ಸಂಘಗಳ ಸದಸ್ಯರ ಜಿಲ್ಲಾ ಮಟ್ಟದ ಕ್ರೀಡಾಕೂಟ

ಮ೦ಗಳೂರು:ಸಹಕಾರ ಕ್ಷೇತ್ರದಲ್ಲಿ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಸದಸ್ಯರುಗಳನ್ನು, ಸಿಬ್ಬಂದಿ ವರ್ಗವನ್ನು ಹಾಗೂ ನವೋದಯ ಸ್ವ- ಸಹಾಯ ಸಂಘಗಳ ಸದಸ್ಯರುಗಳನ್ನು, ಪ್ರೇರಕರನ್ನು ಮತ್ತು ಬ್ಯಾಂಕಿನ ಸಿಬ್ಬಂದಿಗಳನ್ನು ಒಂದೇ ಕಡೆ ಒಗ್ಗೂಡಿಸುವ ಉದ್ದೇಶವನ್ನಿಟ್ಟುಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ (ರಿ.),
ಮಂಗಳೂರು ಸಹಭಾಗಿತ್ವದಲ್ಲಿ ‘‘ಜಿಲ್ಲಾ ಮಟ್ಟದ ಕ್ರೀಡಾಕೂಟ’’ವನ್ನುನ.30ನೇ ಗುರುವಾರ ಪೂರ್ವಾಹ್ನ 9 ಗಂಟೆಗೆ ಪುತ್ತೂರು ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜುನಲ್ಲಿ ಹಮ್ಮಿಕೊಂಡಿದೆ ಎ೦ದುಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ . ಎಂ.ಎನ್. ರಾಜೇಂದ್ರ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಗ್ರಾಮೀಣಾಭಿವೃದ್ಧಿಯ ಮೂಲ ಸೆಲೆಯಾಗಿ ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಸಂಘಗಳು ಹಾಗೂ ಗ್ರಾಮೀಣ ಮಟ್ಟದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡುವನವೋದಯ ಸ್ವ-ಸಹಾಯ ಸಂಘಗಳ ಸದಸ್ಯರುಗಳ ಕ್ರೀಡಾ ವಿಕಸನಕ್ಕೆ ಪ್ರ್ರೇತ್ಸಾಹ ನೀಡುವ ನಿಟ್ಟಿನಲ್ಲಿ ಈ ಕ್ರೀಡಾಕೂಟವನ್ನುಹಮ್ಮಿಕೊಳ್ಳಲಾಗಿದೆ. ಕ್ರೀಡಾಕೂಟದಲ್ಲಿ ಮಹಿಳೆಯರಿಗೆ ಹಾಗೂ ಪುರುಷರಿಗೆ 100 ಮೀಟರ್ ಓಟ, ಗುಂಡು ಎಸೆತ ಹಾಗೂ ಹಗ್ಗ-ಜಗ್ಗಾಟ ಸ್ಪರ್ಧೆಗಳು ನಡೆಯಲಿದೆ. ಸಹಕಾರಿ ಸಂಘಗಳ ಸದಸ್ಯರು, ಸಿಬ್ಬಂದಿಗಳು, ನವೋದಯ ಸ್ವ-ಸಹಾಯ ಸಂಘಗಳ ಸದಸ್ಯರು ಹಾಗೂ ಪ್ರೇರಕರು ಮತ್ತು ದಕ್ಷಿಣ ಕನ್ನಡ ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕಿನ ಸಿಬ್ಬಂದಿ ವರ್ಗದವರು ಒಳಗೊಂಡಂತೆ ಜಿಲ್ಲೆಯ ವಿವಿಧ ತಾಲೂಕಿನಿಂದ ಕ್ರೀಡಾಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವರು ಎ೦ದವರು ವಿವರಿಸಿದರು.
ಸಹಕಾರ ಸಚಿವರಿಂದ ಉದ್ಘಾಟನೆ:
ಜಿಲ್ಲಾ ಮಟ್ಟದ ಈ ಕ್ರೀಡಾಕೂಟದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಸಹಕಾರ ಸಚಿವ ಕೆ. ಎನ್. ರಾಜಣ್ಣರವರು ನೆರವೇರಿಸಲಿರುವರು. ಕರ್ನಾಟಕ ಸರಕಾರದ ಮಾನ್ಯ ಆರೋಗ್ಯಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇವರು ಕ್ರೀಡಾಕೂಟಕ್ಕೆ ಚಾಲನೆ ನೀಡಲಿರುವರು. ಕರ್ನಾಟಕ ಸರಕಾರದ ಮಾನ್ಯ ಅಬಕಾರಿ ಸಚಿವ
ಆರ್. ಬಿ. ತಿಮ್ಮಾಪುರ ಇವರು ಕ್ರೀಡಾ ಜ್ಯೋತಿ ಪ್ರಜ್ವಲನೆ ಮಾಡಲಿರುವರು. ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್‌ಕುಮಾರ್ ಕಟೀಲು ಇವರು ಮೆರವಣಿಗೆಯ ಉದ್ಘಾಟನೆ ಮಾಡಲಿರುವರು ಎ೦ದರು.
ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರಾದ ಡಾ ಎಂ.ಎನ್. ರಾಜೇಂದ್ರ ಕುಮಾರ್‌ರವರು ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ ಕೆ., ಪುಮಾಜಿ ಶಾಸಕ ಸಂಜೀವ ಮಠಂದೂರು ಅವರು ಭಾಗವಹಿಸಲಿರುವರು.
ಸಮಾರೋಪ ಸಮಾರಂಭ :
ಅಪರಾಹ್ನ 4 ಗಂಟೆಗೆ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದೆ. ಪುತ್ತೂರು ಆದರ್ಶ ವಿವಿದ್ದೋದ್ದೇಶ ಸಹಕಾರ ಸಂಘ ನಿ., ಇದರ ಅಧ್ಯಕ್ಷರು ಹಾಗೂ ಹಿರಿಯ ಸಹಕಾರಿಗಳಾದಕೆ. ಸೀತಾರಾಮ ರೈ ಸವಣೂರು ಇವರು ವಿಜೇತರಿಗೆ ಪ್ರಶಸ್ತಿ ವಿತರಣೆ ನೆರವೇರಿಸಲಿರುವರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ರಾಮಕೃಷ್ಣ ಸರಕಾರಿಪ್ರೌಢಶಾಲೆ, ಪುತ್ತೂರು ಇದರ ಸಂಚಾಲಕ ಹೇಮನಾಥ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ನಗರಸಭೆಯ ಮಾಜಿಅಧ್ಯಕ್ಷ ಜೀವಂಧರ ಜೈನ್ ಮತ್ತು ಪುತ್ತೂರು ನಗರಸಭೆಯ ಸದಸ್ಯ ಪಿ. ಜಿ. ಜಗನ್ನಿವಾಸ್ ರಾವ್ ಭಾಗವಹಿಸಲಿರುವರು ಎ೦ದವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್‌ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್‌ ಎಸ್‌. ಕೋಟ್ಯಾನ್‌, ಎಂ. ವಾದಿರಾಜ ಶೆಟ್ಟಿ, ಶಶಿಕುಮಾರ್‌ ರೈ ಬಿ., ಎಸ್‌.ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಹರಿಶ್ಚಂದ್ರ, ಕೆ. ಜೈರಾಜ್‌ ಬಿ.ರೈ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ , ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ , ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles