ಪುತ್ತೂರು: ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿಯೋವ೯ನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬ೦ಧಿಸಿದ್ದಾರೆ.ಸಂಶುದ್ದೀನ್ ಆಸ್ಗರ್ ಆಲಿ (23) ಬ೦ಧಿತ ಆರೋಪಿ.
ಹಾಸನ ತಾಲೂಕು ಚೆನ್ನರಾಯಪಟ್ಟಣದ ನಿವಾಸಿಯಾಗಿರುವ ಸಂತ್ರಸ್ಥ ಮಹಿಳೆಯು ನ.24ರಂದು ರಾತ್ರಿ ಸಮಯ ಪುತ್ತೂರು ಬಸ್ ನಿಲ್ದಾಣದಲ್ಲಿ ಇದ್ದಾಗ, ಅಪರಿಚಿತ ವ್ಯಕ್ತಿಯೋರ್ವ ಮಹಿಳೆಗೆ ಮದ್ಯವನ್ನು ಸೇವಿಸಲು ನೀಡಿ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿರುವ ಘಟನೆ ವರದಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣಾ ಪೊಲೀಸರು ತನಿಖೆ ನಡೆಸಿ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿ, ಪ್ರಸ್ತುತ ಬನ್ನೂರುನಲ್ಲಿ ವಾಸವಿರುವ ಆರೋಪಿ ಸಂಶುದ್ದೀನ್ ಆಸ್ಗರ್ ಆಲಿ ಎಂಬಾತನನ್ನು ನ.28. ರಂದು ಸಂಜೆ ಪುತ್ತೂರು KSRTC ಬಸ್ ನಿಲ್ದಾಣದ ಬಳಿ ಬ೦ಧಿಸಿದ್ದಾರೆ.