21.1 C
Karnataka
Friday, November 15, 2024

ವಿ.ವಿ.ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

ಮಂಗಳೂರು: ಯಾವಾಗಲೂ ವೈಯಕ್ತಿಕ ನೆಲೆಯಲ್ಲಿ ಆಲೋಚನೆ ಮಾಡುವುದನ್ನು ತ್ಯಜಿಸಿ ಸಮಾಜದ ಸಮಸ್ಯೆಗಳಿಗೆ ಮೊದಲು ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆ ಮೂಲಕ
ವಿದ್ಯಾರ್ಥಿಗಳು ಸಮಾಜದಲ್ಲಿ ಮಾದರಿಯಾಗಬೇಕು ಎಂದು ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಸಿದ್ಧಾರ್ಥ್ ಗೋಯಲ್ ತಿಳಿಸಿದರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.155 ವರ್ಷಗಳಷ್ಟು ಇತಿಹಾಸ ಹೊಂದಿರುವ ಈ ಕಾಲೇಜು ಹೊಸ ವಿಚಾರದೆಡೆಗೆ ಗಮನ ಹರಿಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಪರಿಪೂರ್ಣ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಬೋಧಕರ ಪಾತ್ರ ಮಾದರಿಯಾದುದು. ನಾಯಕತ್ವ ಬೆಳೆಸುವ ದೃಷ್ಟಿಯಿಂದ ರಚನೆಯಾದ ವಿದ್ಯಾರ್ಥಿ ಸಂಘ,
ಜವಾಬ್ದಾರಿ ನೀಡಿ ರಾಷ್ಟ್ರ ಮತ್ತು ರಾಜ್ಯ ಮುನ್ನಡೆಸುವ ಉತ್ತಮ ನಾಯಕರನ್ನು ರೂಪಿಸುವಂತಾಗಲಿ ಎಂದು ಹಾರೈಸಿದರು.
ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಕಾಲೇಜು ಸಾವಿರಾರು ಬಡ ಹಾಗೂ ಮಧ್ಯಮ ವರ್ಗದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಅವರು,ವಿದ್ಯಾರ್ಥಿಗಳಿಗೆ ಶಿಕ್ಷಣ, ಮಾರ್ಗದರ್ಶನ ನೀಡುವ ಮೂಲಕ ಸಾಮಾಜಿಕ ಕಾಳಜಿ ಮತ್ತು ಕರ್ತವ್ಯ ನಿಷ್ಠೆಯನ್ನು ಕಾಲೇಜು ಪಾಲಿಸುತ್ತಿದೆ. ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಹೆಚ್ಚಳಕ್ಕೆ ಬೋಧಕಮತ್ತು ಬೋಧಕೇತರ ಸಿಬ್ಬಂದಿಗಳ ಸಹಕಾರವನ್ನು ಸ್ಮರಿಸಿದರು.
ವಿದ್ಯಾರ್ಥಿ ಸಂಘದ ಉಪನಿರ್ದೇಶಕಿ ಪ್ರೊ. ಲತಾ ಎ. ಪಂಡಿತ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೀವಿತ್ ಗಟ್ಟಿ, ಕಾರ್ಯದರ್ಶಿ ಶಿವಪ್ರಸಾದ್ ರೈ, ಸಹ ಕಾರ್ಯದರ್ಶಿ ಪ್ರಗತಿ, ಲಲಿತ ಕಲಾ ಸಂಘದ ಕಾರ್ಯದರ್ಶಿವಿಕಾಸ್ ರಾಜ್, ಸಹ ಕಾರ್ಯದರ್ಶಿ ಕೇಸರಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles