ಮಂಗಳೂರು: ಜಿಲ್ಲೆಯಲ್ಲಿ ಮತ್ತು ಮೂಡಬಿದ್ರೆ ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿರುತ್ತದೆ. ಜಿಲ್ಲೆಯಲ್ಲಿ ಈ ಬಾರಿ ಕಡಿಮೆ ಪ್ರಮಾಣದಲ್ಲಿ ಮಳೆ ಆಗಿರುವುದರಿಂದ ಜಲಮೂಲಗಳ ಸಂಗ್ರಹಣೆ ಕುಸಿದಿದ್ದು, ಮುಂದಿನ ದಿನಗಳಲ್ಲಿ ಜಾನುವಾರುಗಳಿಗೆ ಮೇವಿನ ಅಭಾವವಾಗುವ ಹಾಗೂ ಒಣಮೇವಿನ ದರವು ಅಧಿಕಗೊಳ್ಳುವ ಸಾಧ್ಯತೆ ಇರುತ್ತದೆ.
ಜಿಲ್ಲೆಯಲ್ಲಿ ಭತ್ತದ ಫಸಲು ಕಟಾವಣೆ ಆರಂಭವಾಗಿದ್ದು, ರೈತರು ತಮ್ಮ ಜಾನುವಾರುಗಳಿಗೆ ಮುಂದಿನ ಮಳೆಗಾಲ ಆರಂಭವಾಗುವವರೆಗೆ ಸಾಕಾಗುವಷ್ಟು ಮೇವನ್ನು ಸಂಗ್ರಹಿಸಿಕೊಳ್ಳುವಂತೆ ಹಾಗೂ ಜಿಲ್ಲೆಯ ಹುಲ್ಲನ್ನು ಹೊರ ಜಿಲ್ಲೆ, ರಾಜ್ಯಗಳಿಗೆ ಮಾರಾಟ ಮಾಡದಂತೆ ತಿಳಿಸಲಾಗಿದೆ.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗೋಶಾಲೆಗಳು ತಮ್ಮ ಜಾನುವಾರುಗಳಿಗೆ ಮುಂದಿನ 6-7 ತಿಂಗಳುಗಳಿಗೆ ಸಾಕಾಗುವಷ್ಟು ಮೇವಿನ ಸಂಗ್ರಹಣೆಗೆ ವ್ಯವಸ್ಥೆ ಮಾಡಿಕೊಳ್ಳುವಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.