17.9 C
Karnataka
Saturday, November 23, 2024

ಕದ್ರಿ ಪಾರ್ಕ್ ಸಮಗ್ರ ಅಭಿವೃದ್ಧಿ: ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಕದ್ರಿ ಉದ್ಯಾನವನದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂಪಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಕ್ಯ೯ಟ್ ಹೌಸ್ ಹಾಗೂ ಸುತ್ತಮುತ್ತಲಿನ ಕಚೇರಿಗಳಲ್ಲಿ ನೀರುಗಳು ಎಲ್ಲಿ ಶೇಖರಣೆ ಆಗುತ್ತಿದೆ ಎಂದು ಪರಿಶೀಲಿಸಿ ತ್ಯಾಜ್ಯ ನೀರನ್ನು ಹಾಕುವಂತ ವ್ಯವಸ್ಥೆಯನ್ನು ಮಾಡಬೇಕು ಎಂದು ಸೂಚಿಸಿದರು.
ಕದ್ರಿ ಪಾರ್ಕ್ ರಸ್ತೆಗಳಲ್ಲಿ ವ್ಯಾಪಾರ ಮಾಡುವ ಬೇರೆ ರಾಜ್ಯದ ಕುಟುಂಬಗಳು ತಮ್ಮ ಮಕ್ಕಳೊಂದಿಗೆ ವಾಸಿಸುತ್ತಿದ್ದು, ಅಂಥವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಜಂಟಿಯಾಗಿ ಕಾರ್ಯಚರಣೆ ನಡೆಸಿ ಮಕ್ಕಳನ್ನು ರಕ್ಷಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಕದ್ರಿ ಉದ್ಯಾನವನದಲ್ಲಿ ಸಂಗೀತ ಕಾರಂಜಿ ಮತ್ತು ಲೇಸರ್ ಶೋ ಪ್ರಾರಂಭಿಸಲಾಗುವುದು ಕದ್ರಿ ಪಾರ್ಕ್ ರಸ್ತೆಗಳಿಗೆ ಬೀದಿ ದೀಪಗಳನ್ನು ಅಳವಡಿಸಬೇಕು ಹಾಗೂ ಅಲ್ಲಿ ನಡೆಯುವ ಚಟುವಟಿಕೆಗಳನ್ನು ತಪ್ಪಿಸಲು ಹೋಂ ಗಾರ್ಡ್ ಗಳನ್ನು ನಿಯೋಜಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ವಿಶೇಷ ಮಕ್ಕಳಿಗೆ ಆಟವಾಡಲು ಸರಿಯಾದ ರೀತಿಯ ಆಟಿಕೆಗಳನ್ನು ಒದಗಿಸಬೇಕು. ಮಕ್ಕಳ ರೈಲು ಒಂದು ತಿಂಗಳಿನಿಂದ ಇಂಜಿನ್ ತೊಂದರೆಯಿಂದ ಕಾರ್ಯ ನಿರ್ವಹಿಸುತ್ತಿಲ್ಲ ಇದನ್ನು ಆದಷ್ಟು ಬೇಗ ಸರಿಪಡಿಸುವಂತೆ ಅವರು ತಿಳಿಸಿದ್ದಾರೆ.
ಉದ್ಯಾನವನದಲ್ಲಿ ಬೋರ್ ವೆಲ್ ಕೊರೆದು ನೀರಿನ ವ್ಯವಸ್ಥೆಯನ್ನು ಮಾಡಿ ನರ್ಸರಿಯನ್ನು ನಿರ್ವಹಿಸಬೇಕು. ಕದ್ರಿ ಉದ್ಯಾನವನದೊಳಗಿನ ಉದ್ಯಾನ ಹುಲ್ಲು ಹಾಸುಗಳಿಗೆ ಮತ್ತು ಕಾರಂಜಿಗಳಿಗೆ ನೀರು ಪೂರೈಸಲು ಗಂಗನಪಳ್ಳ ಕೆರೆಯನ್ನು ಅಭಿವೃದ್ಧಿಪಡಿಸುವಂತೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ತಿಳಿಸಲಾಯಿತು ಉದ್ಯಾನವನದಲ್ಲಿ ಸ್ಥಳೀಯವಾಗಿ ಅಲಂಕಾರಿಕ ಸಸ್ಯಗಳು ಮತ್ತು ಔಷಧಿಯ ಸಸ್ಯಗಳ ನಡೆಯಲಾಗುತ್ತಿದ್ದು ಇದನ್ನು ರಕ್ಷಿಸಬೇಕಾಗಿದೆ ವಿಶೇಷ ಚೇತನ ಮಕ್ಕಳಿಗೆ ಪ್ರತ್ಯೇಕ ಆಟದ ಪ್ರದೇಶವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಉದ್ಯಾನವನದ ಸುತ್ತಲೂ ಸಿಸಿಟಿವಿ ಅಳವಡಿಸಲು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕ್ರಮಕೈಗೊಳ್ಳಬೇಕು ಕದ್ರಿ ಉದ್ಯಾನವನದ ಒಳಗಡೆ ಡ್ರೋನ್ ಬಳಸಲು ಅವಕಾಶ ನೀಡಬಾರದು ಹಾಗೂ ಕೆಲವು ಪ್ರದೇಶಗಳಲ್ಲಿ ಡ್ರೋನ್ ಬೆಳಕೆ ನಿಷೇಧ ಎನ್ನುವ ಫಲಕಗಳನ್ನು ಬಳಸುವಂತೆ ಮನವಿ ಮಾದಲಾಯಿತು.ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಆಯುಕ್ತ ಆನಂದ್. ಸಿ. ಎಲ್, ಸ್ಮಾರ್ಟ್ ಸಿಟಿ ಅಧಿಕಾರಿ ಅರುಣಾಪ್ರಭ, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಜಾನಕಿ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles