24.5 C
Karnataka
Thursday, April 30, 2026

ಕಥೊಲಿಕ್ ಸಭಾ ಆಂಜೆಲೊರ್ ಘಟಕದಿಂದ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟ

ಮಂಗಳೂರು:ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಇದರ ಆಂಜೆಲೊರ್ ಘಟಕವು ಗಾರ್ಡಿಯನ್ ಏಂಜೆಲ್ ಧರ್ಮಕ್ಷೇತ್ರ, ನಾಗೋರಿ, ಮಂಗಳೂರು ಇದರ ಅಂತರ ಧರ್ಮೀಯ ಸೌಹಾರ್ದ ಆಯೋಗದ ಸಹಯೋಗದೊಂದಿಗೆ ಡಿಸೆಂಬರ್ 10 ರಂದು ಕಪಿತಾನಿಯೋ ಶಾಲಾ ಕ್ರೀಡಾಂಗಣದಲ್ಲಿ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟವನ್ನು ಏರ್ಪಡಿಸಿತ್ತು.
ಸಿಟಿ ಮತ್ತು ಸಿಟಿ ಎಪಿಸ್ಕೊಪಲ್ ವಲಯದ ಪುರುಷರ 13 ವಾಲಿಬಾಲ್ ಮತ್ತು ಮಹಿಳೆಯರ 10 ಥ್ರೋಬಾಲ್ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಕ್ರೀಡಾಕೂಟದ ಅಂಗವಾಗಿ ಕ್ರೀಡಾಕ್ಷೇತ್ರದಲ್ಲಿ ಉತ್ತಮ ಸಾಧನೆಗೈದ ಧರ್ಮಕ್ಷೇತ್ರದ ವ್ಯಕ್ತಿಗಳಾದ ಪ್ರದೀಪ್ ಡಿಸೋಜಾ, ಹಾಗೂ ಮಿಸ್ಟರ್ ವರ್ಲ್ಡ್ ಖ್ಯಾತಿಯ ರೇಮಂಡ್ ಡಿ’ಸೋಜಾರವರನ್ನು ಸನ್ಮಾನಿಸಲಾಯಿತು. ವಾಲಿಬಾಲ್ ಪಂದ್ಯದಲ್ಲಿ ಬೊಂದೆಲ್ ಎ ತಂಡ ಟ್ರೋಫಿ ಗೆದ್ದರೆ ಬೊಂದೆಲ್ ಬಿ ತಂಡ ಎರಡನೇ ಸ್ಥಾನವನ್ನು ಪಡೆಯಿತು. ಥ್ರೊಬಾಲ್ ಪಂದ್ಯದಲ್ಲಿ ಬೊಂದೆಲ್ ತಂಡ ಪ್ರಥಮ ಸ್ಥಾನವನ್ನು ಹಾಗೂ ವಾಮಂಜೂರು ತಂಡವು ದ್ವಿತೀಯ ಸ್ಥಾನವನ್ನು ಪಡೆಯಿತು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles