21.1 C
Karnataka
Friday, November 15, 2024

ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

ಮಂಗಳೂರು: ಅಪರಾಧ ತಡೆ ಮಾಸಾಚರಣೆ ಅಂಗವಾಗಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್‌, ಮಂಗಳೂರು ನಗರ ಪೊಲೀಸ್‌ ಕೇಂದ್ರ ಉಪ ವಿಭಾಗದವತಿಯಿಂದ ಮಾದಕ ದ್ರವ್ಯ ವಿರೋಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಉಪಪೊಲೀಸ್‌ ಆಯುಕ್ತ (ಅಪರಾಧ ಮತ್ತು ಸಂಚಾರ) ಬಿ. ಎ. ದಿನೇಶ್‌ಕುಮಾರ್‌, ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗೆಗೆ ಮಾಹಿತಿ ನೀಡಿದರು. ಮಾದಕದ್ರವ್ಯಜಾಲವನ್ನು ಪತ್ತೆ ಮಾಡಲು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದರು.ಅಲ್ಲದೇ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ಇದೇ ಸಂದರ್ಭದಲ್ಲಿ ನಡೆಸಲಾಯಿತು.ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ಯುವ ಜನಾಂಗವು ಮಾದಕ ದ್ರವ್ಯದ ಜಾಲದಲ್ಲಿಬೀಳದೇ ಉತ್ತಮವಾದ ಬದುಕು ಕಟ್ಟಿಕೊಳ್ಳುವಂತೆ ಕರೆಯಿತ್ತರು.
ದಕ್ಷಿಣ ಪೊಲೀಸ್‌ ಕೇಂದ್ರದ ಪೊಲೀಸ್‌ ಗುರುರಾಜ್‌, ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದಸಂಯೋಜಕ ಪ್ರೊ. ರಾಮಕೃಷ್ಣ ಬಿ.ಎಂ., ಸ್ನಾತಕೋತ್ತರ ಇತಿಹಾಸ ಹಾಗೂ ಪುರಾತತ್ತ್ವಶಾಸ್ತ್ರವಿಭಾಗದ ಸಂಯೋಜಕಿ ಡಾ. ಮೀನಾಕ್ಷಿ ಎಂ. ಎಂ., ಸ್ನಾತಕೋತ್ತರ ಹಿಂದಿ ವಿಭಾಗದ ಸಂಯೋಜಕಿ ಡಾ. ನಾಗರತ್ನ ರಾವ್‌, ಯೋಗ ವಿಜ್ಞಾನದ ಸಂಯೋಜಕ ಪ್ರೊ. ಕೇಶವಮೂರ್ತಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles