ಮಂಗಳೂರು: ಜನ ಆರೋಗ್ಯ ಸಂಸ್ಥೆ ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ” ಸ್ಪಂದನ ಅಡಿಯಲ್ಲಿ ಯುವ ಪರಿವರ್ತಕರ ಹಾಗೂ ಯುವ ಸಮಲೋಚಕರ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರಗಳನ್ನು ಬಿಳಿ ಹಾಳೆಯಲ್ಲಿ ತಮ್ಮ ಸಂಪೂರ್ಣ ವಿವರಗಳೊಂದಿಗೆ 2024ರ ಜನವರಿ 15ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳ ಕ್ರೀಡಾಂಗಣ ಮಂಗಳೂರು ಕಚೇರಿಗೆ ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.