ಮಂಗಳೂರು :ಮಾದಕ ವಸ್ತುವಾದ ಎ೦ಡಿಎ೦ಎ(MDMA ) ಮಾರಾಟ ಮಾಡುತ್ತಿ ಇಬ್ಬರು ಕುಖ್ಯಾತ ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸರು ಬ೦ಧಿಸಿದ್ದಾರೆ.ಸುರತ್ಕಲ್ ಕಾಟಿಪಳ್ಳದ
ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ(27)ಹಾಗೂ ಉಮರ್ ಫಾರೂಕ್ ಇರ್ಫಾನ್ (26) ಬ೦ಧಿತ ಆರೋಪಿಗಳು.
ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ರೈಲ್ವೆ ಬ್ರಿಜ್ ನಿಂದ ಸರಿಪಳ್ಳಕ್ಕೆ ಹೋಗುವ ಕಚ್ಚಾ ರಸ್ತೆಯಲ್ಲಿ ಕಪ್ಪು ಬಣ್ಣದ ಹೊಂಡ ಆಕ್ಟಿವ್ ಸ್ಕೂಟರ್ ನಲ್ಲಿ ಎ೦ಡಿಎ೦ಎ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿಯ೦ತೆ ಪೋಲಿಸ್ ನಿರೀಕ್ಷಕರು, ಪಿಎಸ್ಐ ಹಾಗೂ ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿ ಆರೋಪಿಗಳನ್ನು ಬ೦ಧಿಸಿದರು.ಅವರಿಂದ 19 gm ಎ೦ಡಿಎ೦ಎ ಹಾಗು ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಮೊಬೈಲ್ ಫೋನ್ ಗಳನ್ನು ಸ್ವಾಧೀನ ಪಡಿಸಿಕೊಂಡಿದೆ. ಇವುಗಳ ಒಟ್ಟು ಮೌಲ್ಯ ರೂ 1,92,800 ಎ೦ದು ಅ೦ದಾಜಿಸಲಾಗಿದೆ.
ಆರೋಪಿ ಜುಟ್ಟು ಅಶ್ಪಕ್ ಮೇಲೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ಕಂಕನಾಡಿ ನಗರ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ ದರೋಡೆ ಸುಲಿಗೆ ದೋಂಬಿ ಸೇರಿ ಒಟ್ಟು 12 ಪ್ರಕರಣಗಳು ದಾಖಲಾಗಿರುತ್ತವೆ. ಆರೋಪಿ ಉಮ್ಮರ್ ಫಾರೂಕ್ ಇರ್ಫಾನ್ ನ ಮೇಲೆ ಮಂಗಳೂರು ದಕ್ಷಿಣ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆ, ಮೂಡಬಿದ್ರೆ ಪೊಲೀಸ್ ಠಾಣೆ, ಬರ್ಕೆ ಪೊಲೀಸ್ ಠಾಣೆ, ಕೊಣಜೆ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್ ಠಾಣೆ, ಕಾರ್ಕಳ ನಗರ ಪೊಲೀಸ್ ಠಾಣೆ, ಶಿವ ಪೊಲೀಸ್ ಠಾಣೆ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ, ಮಂಗಳೂರು ಉತ್ತರ ಪೊಲೀಸ್ ಠಾಣೆ, ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಕೊಲೆಯತ್ನ, ದರೋಡೆ, ಸುಲಿಗೆ, ಸರಗಳ್ಳತನ, ದೊಂಬಿ, ವಾಹನ ಕಳ್ಳತನ ಸೇರಿ ಒಟ್ಟು 25 ಪ್ರಕರಣಗಳು ದಾಖಲಾಗಿರುತ್ತವೆ.