ಮ೦ಗಳೂರು: ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರಾದ ಬಿ. ರಮನಾಥ ರೈ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಪಕ್ಷ ಸಂಘಟನೆ, ಮುಂಬರುವ ಲೋಕಸಭಾ ಚುನಾವಣಾತಯಾರಿ ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದರು.