16.5 C
Karnataka
Monday, November 25, 2024

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ಸರ್ವ ಸದಸ್ಯರ ಸಭೆ

ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ಸರ್ವ ಸದಸ್ಯರ ಸಭೆ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ
ಮಂಗಳೂರಿನ ಪತ್ರಕರ್ತರು ಮಾದರಿಯಾಗಿ ಕೆಲಸ ಮಾಡುತ್ತಿದ್ದಾರೆ, ಪ್ರತಿ ತಿಂಗಳು ಏನಾದರೂ ಒಂದು ವಿಶೇಷ ಕಾರ್ಯಕ್ರಮ ಮಾಡುತ್ತಲೇ ಇರುತ್ತಾರೆ. ಕರಾವಳಿಯ ವಿಶೇಷ ವ್ಯಕ್ತಿಗಳನ್ನು ಗುರುತಿಸುವುದು, ಬ್ರಾಂಡ್ ಮಂಗಳೂರು ಕಾರ್ಯಕ್ರಮ ಮೂಲಕ ಮಂಗಳೂರಲ್ಲಿ ರಾಜ್ಯಕ್ಕೆ ಮಾದರಿಯಾಗುವಂತೆ ತೋರಿಸಿಕೊಟ್ಟಿದ್ದಾರೆ ಎಂದರು.ಪತ್ರಕರ್ತರ ಸಂಘ ಗುರುತಿಸಿದ ಮಹಾಲಿಂಗ ನಾಯ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ ಬಂದಿದ್ದು ಇದು ಮಂಗಳೂರು ಪತ್ರಕರ್ತರ ಸಾಧನೆ ರಾಷ್ಟ್ರಮಟ್ಟ ತಲುಪಿರುವುದಕ್ಕೆ ಸಾಕ್ಷಿಯಾಗಿದೆ. ಪತ್ರಕರ್ತರು ಪ್ರಾಮಾಣಿಕವಾಗಿ ಸುದ್ದಿ ಮಾಡಬೇಕಿದ್ದು, ಸಮಾಜದ ಸಮಸ್ಯೆಗಳನ್ನು ತೆರೆದಿಡುವ ಪ್ರಯತ್ನ ಮಾಡಬೇಕಿದೆ. ಅಲ್ಲದೆ ಸಮಾಜದಲ್ಲಿನ ಪಾಸಿಟಿವ್ ಸುದ್ದಿಗಳನ್ನು ಬೆಳಕಿಗೆ ತರಬೇಕಿದೆ. ಈ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ಪತ್ರಕರ್ತರ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಸಮಾಜಮುಖಿ ಪತ್ರಿಕೋದ್ಯಮಕ್ಕೆ ದಾರಿ ದೀಪವಾಗಿದೆ. ಪತ್ರಿಕೆಗಳು ಆರ್ಥಿಕವಾಗಿಯೂ ಕುಂದು ಉಂಟು ಆಗದಂತೆ ಕಾರ್ಯನಿರ್ವಹಿಸಬೇಕಾಗಿರುವುದು ಇಂದಿನ ದಿನಗಳಲ್ಲಿ ಬಹು ಮುಖ್ಯ. ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ ಅತ್ಯಂತ ಯಶಸ್ಸಾಗಲಿ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿದ್ದ ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸಂಚಾಲಕ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ದ.ಕ. ಕಾರ್ಯನಿರತ ಪತ್ರಕರ್ತರ ಸಂಘ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತದೆ. ಬ್ರಾಂಡ್ ಮಂಗಳೂರು ಸೇರಿದಂತೆ ಪತ್ರಕರ್ತರ ಸಂಘದ ವಿವಿಧ ಕಾರ್ಯಕ್ರಮಗಳು ಅತ್ಯಂತ ಯಶಸ್ಸಾಗಿ ಜನಮಾನಸವನ್ನು ತಲುಪಿದೆ. ಈ ಕ್ರೀಡಾಕೂಟ ಉತ್ತಮವಾಗಿ ಯಶಸ್ಸು ಕಾಣಲಿ ಎಂದು ಹಾರೈಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಲಾಯಿತು.
ವೇದಿಕೆಯಲ್ಲಿ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ್, ಉಪಾಧ್ಯಕ್ಷರಾದ ಭಿ.ಪುಂಡಲಿಕ ಬಾಳೋಜಿ, ಅಜ್ಜಮಾಡ ರಮೇಶ ಕುಟ್ಟಪ್ಪ, ಭವಾನಿಸಿಂಗ್ ಎಂ. ಠಾಕೂರ್, ಕಾರ್ಯದರ್ಶಿ ಮತ್ತಿಕೆರೆ ಜಯರಾಮ, ಸೋಮಶೇಖರ ಕೆರಗೋಡು, ನಿಂಗಪ್ಪ ಚಾವಡಿ, ಖಜಾಂಗಿ ವಾಸುದೇವ ಹೊಳ್ಳ, ರಾಜ್ಯ ಕಾರ್ಯ ಸಮಿತಿ ಸದಸ್ಯರಾದ ಬಾಳ ಜಗನ್ನಾಥ ಶೆಟ್ಟಿ, ಇಬ್ರಾಹಿಂ ಅಡ್ಕಸ್ಥಳ, ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಇದ್ದರು. ರಾಷ್ಟ್ರೀಯ ಸಮಿತಿ ಸದಸ್ಯ ಹಾಗೂ ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles