ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲಾ ಹಂತದ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ನಿಯೋಜಿಸಲು ಸಿಬ್ಬಂದಿ ವಿವರ ಕೂಡಲೇ ಸಲ್ಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.
ಸೋಮವಾರ ಈ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಚುನಾವಣಾ ಮಾನವ ಸಂಪನ್ಮೂಲ ನೋಡಲ್ ಅಧಿಕಾರಿ ಹೇಮಲತಾ ಅವರು ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1876 ಮತಗಟ್ಟೆಗಳಿವೆ. ಪ್ರತಿ ಮತಗಟ್ಟೆಗೂ ವಿವಿಧ ಹಂತಗಳ ಸಿಬ್ಬಂದಿಗಳನ್ನು ನಿಯೋಜಿಸಬೇಕಾಗಿದೆ ಅಲ್ಲದೆ ವಿವಿಧ ಚುನಾವಣಾ ತಂಡಗಳಿಗೆ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಅಧೀನ ಸಿಬ್ಬಂದಿಗಳ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಸೂಚಿಸಿದರು.ಸಭೆಯಲ್ಲಿ ಜಿಲ್ಲಾ ಎನ್‍ಐಸಿ ಅಧಿಕಾರಿ ಅಶ್ವಿನ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.