21 C
Karnataka
Saturday, November 23, 2024

ಜೈಲು ನರ್ಸರಿ: ಸ್ಥಳ ಪರಿಶೀಲನೆ

ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗ್ರೃಹದಲ್ಲಿ ಸಸಿಗಳ ಮಾರಾಟಕ್ಕೆ ನರ್ಸರಿ ಸ್ಥಾಪಿಸುವ ನಿಟ್ಟಿನಲ್ಲಿ ಗುರುವಾರ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.
ಕಾರಾಗೃಹದ ಮುಂಭಾಗದ ಆಭರಣದಲ್ಲಿ ನರ್ಸರಿ ಸ್ಥಾಪನೆಗೆ ಸೂಕ್ತವಾಗಿದೆ ಎಂದು ಪರಿಶೀಲನೆಯಲ್ಲಿ ಅಂತಿಮಗೊಳಿಸಲಾಗಿದೆ.ಈ ಸಂದರ್ಭದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕಾ ಉಪನಿರ್ದೇಶಕ ಎಚ್.ಆರ್. ನಾಯಕ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಕಾರಾಗೃಹ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಇದ್ದರು.
ಜಿಲ್ಲಾ ಕಾರ್ಯಗ್ರಹದಲ್ಲಿ ಕೈದಿಗಳು ವಿವಿಧ ರೀತಿಯ ಹಣ್ಣು, ತರಕಾರಿ, ಅಲಂಕಾರಿಕ ಗಿಡಗಳನ್ನು ಬೆಳೆಸಿದ್ದಾರೆ. ಕಾರಾಗೃಹದ ಹಿಂಭಾಗದ ಖಾಲಿ ಜಾಗದಲ್ಲಿ ಉತ್ತಮ ನೀರಿನ ವ್ಯವಸ್ಥೆಯೊಂದಿಗೆ ಗಿಡಮರಗಳನ್ನು ಬೆಳೆಸಲಾಗಿದೆ. ಬುಧವಾರ ಕಾರಾಗೃಹದಲ್ಲಿ ಕನ್ನಡ ಸಂಸ್ಕøತಿ ಇಲಾಖೆಯಿಂದ ಏರ್ಪಡಿಸಲಾಗಿದ್ದ ಸಾ೦ಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿಗಳು ಗಿಡಮರಗಳ ನರ್ಸರಿ ವೀಕ್ಷಿಸಿ, ಅತೀವ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅಲ್ಲದೆ ಕಾರಾಗೃಹದಲ್ಲಿ ಸಸಿಗಳ ಮಾರಾಟಕ್ಕೆ ನರ್ಸರಿ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles