18.6 C
Karnataka
Saturday, November 23, 2024

ಜ. 14ರಂದು ‘ಸುವರ್ಣಯುಗ’ ಗ್ರಂಥ ಬಿಡುಗಡೆ

ಮಂಗಳೂರು: ತುಳುನೆಲದ ಅಪೂರ್ವ ಪ್ರತಿಭೆ, ಜನಸೇವಕ, ಶಿಕ್ಷಣಪ್ರೇಮಿ, ಹೋಟೆಲ್ ಉದ್ಯಮಿ, ಬ್ಯಾಂಕಿಂಗ್ ಕ್ಷೇತ್ರದ ಮುತ್ಸದ್ದಿ, ಸರ್ವಧರ್ಮದ ಜನರ ಅಭಿಮಾನದ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ, ಅನಿತಾ ಪಿ. ತಾಕೊಡೆ ಬರೆದಿರುವ ‘ಸುವರ್ಣಯುಗ’ ಕೃತಿ ಬಿಡುಗಡೆ ಸಮಾರಂಭ ಜನವರಿ 14ರಂದು ಸಂಜೆ 4ಗಂಟೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಜಯ ಸಿ. ಸುವರ್ಣ ಸಭಾಂಗಣದಲ್ಲಿ ನಡೆಯಲಿದೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಅಡ್ವೆ ರವೀಂದ್ರ ಪೂಜಾರಿ ಹೇಳಿದರು.

ಭಾರತ್‌ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕದ ವಿಧಾನಸಭೆ ಸ್ಪೀಕ‌ರ್ ಯು.ಟಿ.ಖಾದರ್ ಉದ್ಘಾಟಿಸುವರು. ಕೇಂದ್ರದ ಮಾಜಿ ಸಚಿವರಾದ ಜನಾರ್ದನ ಪೂಜಾರಿಯವರು ಬಿಡುಗಡೆಗೊಳಿಸಲಿದ್ದಾರೆ. ನಿವೃತ್ತ ಪ್ರಾಧ್ಯಾಪಕರಾದ ಅಡ್ವೆ ರವೀಂದ್ರ ಪೂಜಾರಿ ಗ್ರಂಥವನ್ನು ಪರಿಚಯಿಸಲಿದ್ದಾರೆ. ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್. ಪದ್ಮರಾಜ್ ಅಭಿನಂದನಾ ಭಾಷಣ ಮಾಡುಲಿರುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ವಿಧಾನಪರಿಷತ್ ವಿಪಕ್ಷ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮಾನಾಥ ಕೋಟ್ಯಾನ್, ಗುರ್ಮೆ ಸುರೇಶ್ ಶೆಟ್ಟಿ, ಸುನೀಲ್ ಕುಮಾರ್, ಯಶಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಹರೀಶ್ ಕುಮಾರ್, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ,ಅಭಯಚಂದ್ರ ಜೈನ್, ಬಿ.ರಮಾನಾಥ ರೈ, ಮಾಜಿ ಶಾಸಕರಾದ ಕೆ.ವಸಂತ ಬಂಗೇರ, ಗೋಪಾಲ ಪೂಜಾರಿ, ರುಕ್ಮಯ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ಡಾ.ರಾಜಶೇಖರ್ ಕೋಟ್ಯಾನ್, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಅಖಿಲ ಭಾರತ ಬಿಲ್ಲವರ ಒಕ್ಕೂಟ ಅಧ್ಯಕ್ಷ ನವೀನಚಂದ್ರ ಡಿ.ಸುವರ್ಣ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ.ಮೋಹನ್ ಆಳ್ವ, ಭಾರತ್ ಬ್ಯಾಂಕ್ ಮಾಜಿ ಉಪಾಧ್ಯಕ್ಷರಾದ ರೋಹಿಣಿ ಸಾಲಿಯಾನ್, ಉದ್ಯಮಿಗಳಾದ ರವಿ ಎಸ್.ಶೆಟ್ಟಿ, ಕೆಪಿಸಿಸಿ ಪ್ರಧಾನ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಸಾಯಿ ಕೇರ್ ಲಾಜಿಸ್ಟಿಕ್ಸ್‌ನ ಸುರೇಂದ್ರ ಎ. ಪೂಜಾರಿ, ಬೆಂಗಳೂರು ಬಿಲ್ಲವ ಸಂಘದ ಅಧ್ಯಕ್ಷ ವೇದಕುಮಾರ್, ಕುದ್ರೋಳಿ ಕ್ಷೇತ್ರದ ಉಪಾಧ್ಯಕ್ಷೆ ಊರ್ಮಿಳಾ ರಮೇಶ್ ಕುಮಾರ್, ಶಶಿ ಎಂ. ಸಾಲಿಯಾನ್ , ಭಾಸ್ಕರ್ ಎಂ. ಸಾಲಿಯಾನ್ ಕುಟುಂಬಸ್ಥರು, ನಿತ್ಯಾನಂದ ಡಿ. ಕೋಟ್ಯಾನ್ ಸೇರಿ ಧಾರ್ಮಿಕ, ರಾಜಕೀಯ, ಸಾಮಾಜಿಕ ಕ್ಷೇತ್ರದ ಪ್ರತಿಷ್ಠಿತ ಗಣ್ಯರು ಉಪಸ್ಥಿತರಿರುವರು ಎಂದರು.

ನಮ್ಮ ಕುಡ್ಲ ವಾಹಿನಿ ಆಡಳಿತ ನಿರ್ದೇಶಕರಾದ ಲೀಲಾಕ್ಷ ಕರ್ಕೇರ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ದೇವೇಂದ್ರ ಪೂಜಾರಿ, ಭಾರತ್‌ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಸುದ್ದಿಗೋಷ್ಠಿಯಲ್ಲಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles