16.7 C
Karnataka
Saturday, November 23, 2024

ಪುಂಜಾಲಕಟ್ಟೆ:ಸ್ಕೂಟರಿಗೆ ಬಸ್ ಡಿಕ್ಕಿ ಹೊಡೆದು ಸವಾರ ಸಾವು

ಪುಂಜಾಲಕಟ್ಟೆ :ಸ್ಕೂಟರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಸವಾರ ನಂದಕುಮಾರ್ ಎಂಬವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಪಿಲಾತ್ತಬೆಟ್ಟು ಗ್ರಾಮದ ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪ ಬುಧವಾರ ಸ೦ಭವಿಸಿದೆ.
ಬುಧವಾರ ಮಧ್ಯಾಹ್ನ ಸಮಯ, ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪ ಕೆಎಸ್ಆರ್ಟಿಸಿ ಬಸ್ಸನ್ನು, ಅದರ ಚಾಲಕ ಬೀಮಪ್ಪ ಸಂಗಪ್ಪ ಮುಗನೂರು ಎಂಬವರು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ, ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟರ್ ಸವಾರ ನಂದಕುಮಾರ್ ಅವರು ಸ್ಕೂಟರಿನಿಂದ ರಸ್ತೆಗೆ ಎಸೆಯಲ್ಪಟ್ಟಿದ್ದು, ಸ್ಕೂಟರ್ ಬಸ್ ನ ಅಡಿಯಲ್ಲಿ ಸಿಲುಕಿಕೊಂಡು ನಿಂತಿರುತ್ತದೆ. ಅಲ್ಲಿ ಸೇರಿದ್ದ ಸಾರ್ವಜನಿಕರು ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಅದಾಗಲೇ ಅವರು ಮೃತಪಟ್ಟಿದ್ದರು. ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ‌ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles