26.3 C
Karnataka
Saturday, November 23, 2024

ಜ.22:ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವ್ಯಾಪಕ ಬಂದೋಬಸ್ತ್

ಮಂಗಳೂರು : ಜ.22:ರಂದು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ ಬಂದೋಬಸ್ತ್ ಯೋಜನೆಯನ್ನು ಕೈಗೊಳ್ಳಲಾಗಿದೆ ಎ೦ದು ಮಂಗಳೂರು ಪೊಲೀಸ್ ಕಮಿಷನರ್‌ ತಿಳಿಸಿದ್ದಾರೆ..
ಮಂಗಳೂರು ನಗರದಲ್ಲಿ ದೇವಸ್ಥಾನ ಮತ್ತು ಮಂದಿರಗಳಲ್ಲಿ ಒಟ್ಟು 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ ನಡೆಯುವ ಸ್ಥಳಗಳನ್ನು ಗುರುತಿಸಲಾಗಿದೆ.
131 ಸೂಕ್ಷ್ಮ ಪ್ರದೇಶಗಳಲ್ಲಿ ಹಗಲು ರಾತ್ರಿ ಪಿಕೆಟಿಂಗ್ ನೇಮಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ನಗರದಾದ್ಯಂತ 57 ಸೆಕ್ಟರ್ ಮೊಬೈಲ್ಗಳನ್ನು 24 ಗಂಟೆ ಹಗಲು ರಾತ್ರಿ ಗಸ್ತಿನಲ್ಲಿರುವ ವ್ಯವಸ್ಥೆಯನ್ನು ಮಾಡಲಾಗಿದೆ. 14 ಸ್ಥಳಗಳಲ್ಲಿ ಚೆಕ್ ಪಾಯಿ೦ಟ್‌ ಗಳನ್ನು ನಿಯೋಜಿಸಲಾಗಿದೆ. 9 ಸಿ.ಎ.ಆರ್ ಮತ್ತು 3 ಕೆ.ಎಸ್.ಆರ್.ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ತಡರಾತ್ರಿ ಮತ್ತು ಮುಂಜಾನೆ ವಿಶೇಷ ಗಸ್ತುಗಳನ್ನು ಆಯೋಜಿಸಲಾಗಿದೆ. ಮಂಗಳೂರು ನಗರದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿದ್ವಂಸಕ ತಪಾಸಣಾ ತಂಡದಿಂದ ತಪಾಸಣೆ ನಡೆಸಲಾಗುತ್ತಿದೆ.
ರಾಜ್ಯದಲ್ಲಿ ಅಳವಡಿಸಲಾದ ಕ್ರಮದಂತೆ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮೆರವಣಿಗೆ, ರ್ಯಾಗಳಿಗೆ ಅನುಮತಿ ನೀಡಿರುವುದಿಲ್ಲ. ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಆಯಾ ಎ.ಸಿ.ಪಿ ರವರ ಮಾರ್ಗದರ್ಶನದಲ್ಲಿ ಈಗಾಗಲೇ ಶಾಂತಿ ಸಭೆಗಳನ್ನು ಆಯೋಜಿಸಲಾಗಿರುತ್ತದೆ. ಪ್ರತೀ ಪೊಲೀಸ್ ಠಾಣಾ ಮಟ್ಟದಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವಲ್ಲಿ ಏರಿಯಾ ಡಾಮಿನೇಷನ್ ಮತ್ತುರೂಟ್ ಮಾರ್ಚ್ ಕೈಗೊಳ್ಳಲಾಗಿದೆ.
ಮಹಾನಗರ ಪಾಲಿಕೆಯೊಂದಿಗೆ ಸಮನ್ವಯ ಸಾಧಿಸಿ ಫ್ಲೆಕ್ಸ್, ಬ್ಯಾನರ್ ಬಂಟಿಂಗ್ಸ್ ಅಳವಡಿಕೆಗಳ ಮೇಲೆ ಸೂಕ್ತ ನಿಗಾ ಇರಿಸಲಾಗಿದೆ. ಮತ್ತು ಆಯೋಜಕರಿಗೆ ಅವುಗಳ ಭದ್ರತೆಯನ್ನು ಖಚಿತಪಡಿಸಲು ಸೂಚಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜ. 21ರ ಮಧ್ಯರಾತ್ರಿಯಿಂದ ಜ. 23 ರ ಮುಂಜಾನೆಯ ವರೆಗೆ ನಗರದಲ್ಲಿರುವ ಎಲ್ಲಾ ರೀತಿಯ ಬಾರ್ರ್ಗಳು ಮತ್ತು ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಂಗಳೂರ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟಾರೆಯಾಗಿ 3-ಡಿಸಿಪಿ, 6-ಎಸಿಪಿ, 11-ಪಿ.ಐ ಮತ್ತು 37-ಪಿ.ಎಸ್.ಐ ದರ್ಜೆಯ ಅಧಿಕಾರಿಗಳನ್ನು ಹಾಗೂ 781 ಪೊಲೀಸ್ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ ಎ೦ದು ಮಂಗಳೂರು ಪೊಲೀಸ್ ಕಮಿಷನರ್‌ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles