17.9 C
Karnataka
Saturday, November 23, 2024

ವಗ್ಗ ದರೋಡೆ ಪ್ರಕರಣವನ್ನು ಭೇದಿಸಿದ ದ.ಕ.ಜಿಲ್ಲಾ ಪೊಲೀಸರು

ಬಂಟ್ವಾಳ: ದ.ಕ.ಜಿಲ್ಲೆಯ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ಜ.11ರಂದು ಮುಂಜಾನೆ ನಡೆದ ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನುಪೊಲೀಸರು ಬ೦ಧಿಸಿದ್ದಾರೆ.

ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26), ದಿನೇಶ್‌ ನಾಯ್ಕ (22), ಸಾಗರ ಶೆಟ್ಟಿ (21) ಮಂಗಳೂರು, ಐಕಳ

ಗ್ರಾಮದ ರಾಕೇಶ್‌ ಎಲ್.‌ ಪಿಂಟೋ (29), ಕಡಬ ಬೆಳಂದೂರು ಗ್ರಾಮದ ಎಂ.ಸೀತಾರಾಮ @ ಪ್ರವೀಣ್‌ (36), ಸುಧೀರ್‌ (29) ಹಾಗೂ ದರೋಡೆಗೈದ ಚಿನ್ನಾಭರಣವನ್ನು ಸ್ವೀಕರಿಸಿದ ಮೂಲತ: ಬಂಟ್ವಾಳ ತಾಲೂಕಿನ, ಇರಾ ಗ್ರಾಮದವನಾದ ಪ್ರಸ್ತುತ ಗೌರಿ ಕಾಲುವೆ,

ಚಿಕ್ಕಮಗಳೂರು ಜಿಲ್ಲೆ ವಾಸಿ ಮಹಮ್ಮದ್‌ ಹನೀಫ್‌ (49) ಬ೦ಧಿತ ಆರೋಪಿಗಳು. ಆರೋಪಿಗಳಿಂದ ರೂ.3,15,000 ಮೌಲ್ಯದ ಚಿನ್ನಾಭರಣ ಹಾಗು ದರೋಡೆಗೆ ಬಳಸಿದ ಅಂದಾಜು ರೂ. 8 ಲಕ್ಷ ಮೌಲ್ಯದ ಇನ್ನೋವಾ ಕಾರು ಹಾಗು ಅಂದಾಜು ರೂ. 2 ಲಕ್ಷ ಮೌಲ್ಯದ ಟಾಟಾ ಇಂಡಿಕಾ ಕಾರು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.


ಸದ್ರಿ ಆರೋಪಿಗಳ ಪೈಕಿ ಗಣೇಶ ನಾಯ್ಕ ಎಂಬಾತನು 2023ನೇ ಸಾಲಿನಲ್ಲಿ ಮಂಗಳೂರು ನಗರ ವ್ಯಾಪ್ತಿಯ ಮುಲ್ಕಿಯಲ್ಲಿ ಐಕಳ ಹರೀಶ್‌ ಶೆಟ್ಟಿ ಎಂಬವರ ಮನೆಯಿಂದ ಅಪಾರ ಮೊತ್ತದ ನಗದು, ಚಿನ್ನಾಭರಣ, ವಜ್ರ ಕಳವು ಮಾಡಿದ ಪ್ರಕರಣದ ಮುಖ್ಯ ಆರೋಪಿಯಾಗಿದ್ದು,

ಉಳಿದಂತೆ ಸೀತಾರಾಮ @ ಪ್ರವೀಣ್‌, ಸುಧೀರ್‌ ಹಾಗು ಮಹಮ್ಮದ್‌ ಹನೀಫ್‌ ರವರ ವಿರುದ್ದ ದ.ಕ.ಜಿಲ್ಲೆ ಹಾಗು ಇನ್ನಿತರ ಜಿಲ್ಲೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿರುವ ಬಗ್ಗೆ ತನಿಖೆಯಿಂದ ತಿಳಿದು ಬಂದಿರುತ್ತದೆ.ಸದ್ರಿ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಬಹುಮಾನವನ್ನು ಘೋಷಿಸಿದ್ದಾರೆ.

ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡವು, ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26), ದಿನೇಶ್‌ ನಾಯ್ಕ (22), ಸಾಗರ ಶೆಟ್ಟಿ (21) ಮಂಗಳೂರು, ಐಕಳ ಗ್ರಾಮದ ರಾಕೇಶ್‌ ಎಲ್.‌ ಪಿಂಟೋ (29), ಕಡಬ ಬೆಳಂದೂರು ಗ್ರಾಮದ ಎಂ.ಸೀತಾರಾಮ @ ಪ್ರವೀಣ್‌ (36), ಸುಧೀರ್‌ (29) ಹಾಗೂ ದರೋಡೆಗೈದ ಚಿನ್ನಾಭರಣವನ್ನು ಸ್ವೀಕರಿಸಿದ ಮೂಲತ: ಬಂಟ್ವಾಳ ತಾಲೂಕಿನ, ಇರಾ ಗ್ರಾಮದವನಾದ ಪ್ರಸ್ತುತ ಗೌರಿ ಕಾಲುವೆ, ಚಿಕ್ಕಮಗಳೂರು ಜಿಲ್ಲೆ ವಾಸಿ ಮಹಮ್ಮದ್‌ ಹನೀಫ್‌ (49) ಎ೦ಬವರನ್ನು ವಶಕ್ಕೆ ಪಡೆದು, ಆರೋಪಿಗಳಿಂದ ರೂ.3,15,000 ಮೌಲ್ಯದ ಚಿನ್ನಾಭರಣ ಹಾಗು ದರೋಡೆಗೆ ಬಳಸಿದ ಅಂದಾಜು ರೂ. 8 ಲಕ್ಷ ಮೌಲ್ಯದ ಇನ್ನೋವಾ ಕಾರು ಹಾಗು ಅಂದಾಜು ರೂ. 2 ಲಕ್ಷ ಮೌಲ್ಯದ ಟಾಟಾ ಇಂಡಿಕಾ ಕಾರು ಸ್ವಾಧೀನಪಡಿಸಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles