18.6 C
Karnataka
Saturday, November 23, 2024

ಖ್ಯಾತ ಸಾಹಿತಿ ಡಾ .ಜೆರಾಲ್ಡ್‌ ಪಿಂಟೊಗೆ ಕೊಂಕಣಿ ಲೇಖಕ್ ಸಂಘದ ಸಾಹಿತ್ಯ ಪ್ರಶಸ್ತಿ

ಮ೦ಗಳೂರು: 2024ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಸಾಹಿತಿ ಡಾ. ಜೆರಾಲ್ಡ್‌ ಪಿಂಟೊ (ಜೆರಿ ನಿಡ್ಡೋಡಿ) ಅವರನ್ನು ಆಯ್ಕೆ
ಮಾಡಲಾಗಿದೆ. ಪ್ರಶಸ್ತಿಯು ರುಪಾಯಿ 25000/- ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.ಕೊಂಕಣಿ ಲೇಖಕ್ ಸಂಘ್ ಕರ್ನಾಟಕ, ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2018ರಲ್ಲಿಆರಂಭಗೊಂಡಿತು. 2022ರಲ್ಲಿ ಕೊಂಕಣಿ ಸಾಹಿತ್ಯಕ್ಕೆ ವಿಶೇಷ ಕೊಡುಗೆನೀಡಿದ ಲೇಖಕರನ್ನು ಆಯ್ಕೆ ಮಾಡಿ ಗೌರವಿಸಲು ಕೊಂಕಣಿ ಲೇಖಕ್ ಸಂಘ್ ನಿರ್ಧರಿಸಿತು.
ಜೆರಿ ನಿಡ್ಡೋಡಿ ಅವರ 6 ಕಾದಂಬರಿಗಳು, 75 ಕತೆಗಳು ಹಾಗೂ 900ಕ್ಕೂ ಮೇಲ್ಪಟ್ಟು ಲೇಖನಗಳು ಕೊಂಕಣಿ
ಪತ್ರಿಕೆಗಳಲ್ಲಿ ಈವರೆಗೆ, ಪ್ರಕಟಗೊಂಡಿವೆ. ಕುಡ್ಮಿ ಕೊಂಕ್ಣಿ ಲೋಕ್‌ವೇದ್ ಎಂಬ ಸಂಶೋಧನಾ ಗ್ರ೦ಥ ಹಾಗೂ ವಿಸಾವ್ಯಾ ಶೆಕ್ಡ್ಯಾಚೆ ಕೊಂಕ್ಣಿ ಮ್ಹಾನ್ಮನಿಸ್ ಎಂಬ ಕೃತಿಯನ್ನು ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪ್ರಕಟಿಸಿದ್ದಾರೆ. ಅವರು ಬರೆದ ಇನ್ನಿತರ
ಪುಸ್ತಕಗಳಲ್ಲಿ ತುಜೆಂ ಶಿಕಾಪ್, ತುಜಿ ವೃತ್ತಿ, ಗ್ಯಾಲಕ್ಸಿ, ವಿಶ್ವ್‌ ವಿಜ್ಞಾನ್ ಪ್ರಮುಖವಾಗಿವೆ.ಜೆರಿ, ನಿಡ್ಡೋಡಿ ಅವರಿಗೆ ಕೊಂಕ್ಣಿ ಕುಟಮ್ ಬಾಹ್ರೇಯ್ನ್‌ , ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ದಾಯ್ಜಿ ದುಬಾಯ್, ದಿವೊ ಸಾಹಿತ್ಯ ಪ್ರಶಸ್ತಿ ಲಭಿಸಿವೆ.
ರಾಕ್ಣೊ ಸಂಪಾದಕೀಯ ಮಂಡಳಿಯ ಸದಸ್ಯರಾಗಿ, ಆಮ್ಚೊ ಸಂದೇಶ್ ಪತ್ರಿಕೆಯ ಸಂಪಾದಕರಾಗಿ, ಮಿಲಾರ್‌ಚಿಂ ಲ್ಹಾರಾಂ
ತ್ರೈಮಾಸಿಕದ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. ಕಥೊಲಿಕ್ ಸಭಾದ ಕೇಂದ್ರೀಯ ಅಧ್ಯಕ್ಷರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿದ್ದ ಅವರು ಉಡುಪಿಯಲ್ಲಿ ಕೊಂಕ್ಣಿ ಭಾಸ್, ಸಾಹಿತ್ಯ್‌ ಕಲಾ ಅನಿ ಸಾಂಸ್ಕೃತಿಕ್ ಸಂಘಟನ್ ಎಂಬ ಸಂಘಟನೆಯನ್ನು ಸ್ಥಾಪಿಸಿ ಅನೇಕ ಕೊಂಕಣಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅವರು ಪ್ರಾಂಶುಪಾಲರಾಗಿನಿವೃತ್ತರಾಗಿದ್ದಾರೆ. ಪ್ರಸ್ತುತ ಎಂ.ಸಿ.ಸಿ ಬ್ಯಾಂಕಿನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ಫೆಬ್ರವರಿ 17, 2024ನೇ ಶನಿವಾರ ಸಂಜೆ 6.30ಕ್ಕೆ, ಸಂದೇಶ ಪ್ರತಿಷ್ಠಾನ, ಬಜ್ಜೋಡಿ, ಮಂಗಳೂರು, ಇಲ್ಲಿ ಜರಗಲಿರುವುದು.
ಪತ್ರಿಕಾ ಗೋಷ್ಠಿಯಲ್ಲಿ ಕೊಂಕಣಿ ಲೇಖಕ್ ಸಂಘದ ರಿಚಾಡ್‌೯ ಮೋರಾಸ್‌, ಡೋಲ್ಫಿ ಎಫ್‌ ಲೋಬೋ, ಹೆನ್ರಿ ಮಸ್ಕರೇನಸ್‌, ಜೆ,ಎಫ್.ಡಿಸೋಜ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles