18.6 C
Karnataka
Saturday, November 23, 2024

ಬೆಳ್ಳಾರೆ ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳ ಬ೦ಧನ

ಪುತ್ತೂರು :ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ, ಜ.11 ರಂದು ಮಧ್ಯಾಹ್ನ ಮಹಿಳೆಯೊಬ್ಬರ ಚಿನ್ನದ ಸರವನ್ನು ಅಪರಿಚಿತರು ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಶೇಷ ತನಿಖಾ ತಂಡ ಬ೦ಧಿಸಿದೆ.ಮುಕ್ವೆ, ನರಿಮೊಗರು ಗ್ರಾಮ ನಿವಾಸಿ ನೌಶಾದ್ ಬಿ .ಎ (36) ಮತ್ತು ಸುಲಿಗೆಗೆ ಸಹಕರಿಸಿದ ಉದ್ಯಾವರ, ಕಾಸರಗೋಡು, ಕೇರಳ ನಿವಾಸಿ ಚಂದ್ರಮೋಹನ್ (42) ಬ೦ಧಿತ ಆರೋಪಿಗಳು.
ಚಿನ್ನದ ಸರವನ್ನು ಅಪರಿಚಿತರು ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಶೀಘ್ರ ಪತ್ತೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.. ತನಿಖಾ ತಂಡವು ಪ್ರಕರಣದ ತನಿಖೆ ನಡೆಸಿ, ಆರೋಪಿಗಳಾದ ಮುಕ್ವೆ, ನರಿಮೊಗರು ನೌಶಾದ್ ಬಿ ಎ ಮತ್ತು ಸುಲಿಗೆಗೆ ಸಹಕರಿಸಿದ ಉದ್ಯಾವರ, ನಿವಾಸಿ ಚಂದ್ರಮೋಹನ್ ಎಂಬವರುಗಳನ್ನು ವಶಕ್ಕೆ ಪಡೆದು, ಆರೋಪಿಗಳಿಂದ ರೂ .80,000 ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ರೂ 1,00,000/- ಮೌಲ್ಯದ ಸ್ಕೂಟರನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ.
ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ. ಬಿ . ರಿಷ್ಯಂತ್ ಅವರು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಮತ್ತು ರಾಜೇಂದ್ರ ಅವರ ಮುಂದಾಳತ್ವದಲ್ಲಿ, ಪುತ್ತೂರು ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ, ಅವರ ನೇತೃತ್ವದ, ಸುಳ್ಯ ವೃತ್ತ ನಿರೀಕ್ಷಕ ಮೋಹನ್ ಕೊಠಾರಿ , ಬೆಳ್ಳಾರೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರುಗಳಾದ ಸಂತೋಷ್ ಬಿ .ಪಿ ಮತ್ತು ಅಶೋಕ್ ಸಿ.ಎಂ. ಅವರ ಎರಡು ವಿಶೇಷ ತನಿಖಾ ತಂಡಗಳು ಕಾರ್ಯಾಚರಿಸಿರುತ್ತದೆ. ತನಿಖಾ ತಂಡದಲ್ಲಿ ಎ ಎಸ್ ಐ ದಾಮೋದರ ನಾಯ್ಕ, ಸಿಬ್ಬಂದಿಗಳಾದ ನವೀನ್ ಕಟ್ಟತ್ತಾರು , ಸತೀಶ್ ಬಿ, ಕೃಷ್ಣಪ್ಪ, ಚಂದ್ರಶೇಖರಗೌಡ, ಚಂದ್ರಶೇಖರ ಗೆಜ್ಜಳ್ಳಿ, ಮಂಜುನಾಥ, ಚೇತನ, ಪ್ರವೀಣ ಬಾರ್ಕಿ, ಸಂತೋಷ ಕೆ ಜಿ, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ, ಸಂಪತ್ ಅವರು ಕಾರ್ಯನಿರ್ವಹಿಸಿರುತ್ತಾರೆ .ತನಿಖಾ ತಂಡದ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿದ್ದು, ಸಾರ್ವಜನಿಕ ವಲಯದಲ್ಲಿಯೂ ಪ್ರಶಂಸೆಯನ್ನು ವ್ಯಕ್ತವಾಗಿರುತ್ತದೆ

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles