16.7 C
Karnataka
Saturday, November 23, 2024

ಫೆ.16ರಿಂದ ತಣ್ಣೀರುಬಾವಿ ಬೀಚ್‍ನಲ್ಲಿ ತಪಸ್ಯ ಬೀಚ್ ಉತ್ಸವ, ಟ್ರಯತ್ಲಾನ್

ಮಂಗಳೂರು: ಫೆಬ್ರವರಿ 16 ರಿಂದ 18ರವರೆಗೆ ತಣ್ಣೀರುಬಾವಿ ಬೀಚ್‍ನಲ್ಲಿ ಮಂಗಳೂರು ಟ್ರಯತ್ಲಾನ್ ಮತ್ತು ತಪಸ್ಯ ಬೀಚ್ ಫೆಸ್ಟಿವಲ್ ಬಗ್ಗೆ ಸಭೆಯು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಮಂಗಳೂರನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವ ಉದ್ದೇಶದಿಂದ ಮತ್ತು ಕ್ಯಾನ್ಸರ್ ರೋಗಿಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ತಪಸ್ಯ ಸಂಸ್ಥೆಯು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ ಎಂದು ಸಂಸ್ಥೆಯ ಟ್ರಸ್ಟಿ ಡಾ. ಆಶಾಜ್ಯೋತಿ ರೈ ಹೇಳಿದರು.
ಫೆಬ್ರವರಿ 16 ರಂದು ತಪಸ್ಯ ಬೀಚ್ ಉತ್ಸವದ ಉದ್ಘಾಟನಾ ಕಾರ್ಯಕ್ರಮವು ತಣ್ಣೀರುಬಾವಿ ಸರ್ಫ್‍ಕ್ಲಬ್‍ನಲ್ಲಿ ನಡೆಯಲಿದೆ. ಸೈಕ್ಲಿಂಗ್, ವಾಲಿಬಾಲ್ ಪಂದ್ಯಾಟ, ಕುಸ್ತಿ ಪಂದ್ಯಾಟ, ಮಲ್ಲಗಂಬ ಪಂದ್ಯಾಟ, 21ಕೆ ರನ್, ಗಾಳಿಪಟ, ಆಹಾರ ಉತ್ಸವ, ಕೃಷಿ ಮೇಳ, ಕ್ಯಾನ್ಸರ್ ಜಾಗೃತಿ ಅಭಿಯಾನ, ಸಂಜೆ 6 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ಹೇಳಿದರು. ಮಂಗಳೂರಿನಲ್ಲಿ ವೈದ್ಯಕೀಯ ಮತ್ತು ಶೈಕ್ಷಣಿಕ ಕ್ಷೇತ್ರಗಳು ಅಭಿವೃದ್ಧಿ ಹೊಂದಿದ್ದು ವೈದ್ಯಕೀಯ ಪ್ರವಾಸ ಹಾಗೂ ಶೈಕ್ಷಣಿಕ ಪ್ರವಾಸವನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ತಪಸ್ಯ ಬೀಚ್ ಉತ್ಸವವನ್ನು ಸುಸೂತ್ರವಾಗಿ ನಡೆಸಲು ಮೂಲಭೂತ ಸೌಕರ್ಯಗಳು, ಪಾರ್ಕಿಂಗ್, ಭದ್ರತೆ, ಸ್ವಚ್ಛತೆ, ವೈದ್ಯಕೀಯ ಸಹಾಯ, ವಿದ್ಯುತ್, ಸಂಚಾರ ನಿರ್ವಹಣೆಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.
ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಮಾತನಾಡಿ, ಜಿಲ್ಲಾಡಳಿತದ ವತಿಯಿಂದ ಸಹಕಾರವನ್ನು ನೀಡುವ ಭರವಸೆಯನ್ನು ನೀಡಿದರು. ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್, ಎಸಿಪಿ ಗೀತಾ ಕುಲಕರ್ಣಿ ಮತ್ತಿತರರು ಇದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles