ಸುಬ್ರಹ್ಮಣ್ಯ, : ಇತ್ತೀಚೆಗೆ ಒಂದೇ ದಿನ ಸಾವಿರಾರು ಚಾರಣಿಗರು ಆಗಮಿಸಿ ಸುದ್ದಿಯಾಗಿದ್ದ, ಕುಮಾರಪರ್ವತ ಚಾರಣ ಪಥಕ್ಕಿಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದರು.
ಪ್ರಸಕ್ತ ಚಾರಣಕ್ಕೆ ತಾತ್ಕಾಲಿಕ ನಿರ್ಬಂಧ ಹೇರಿರುವ ಪ್ರವೇಶದ್ವಾರದಲ್ಲಿ ಚಾರಣ ಪಥದ ವಿವರ ಪಡೆದ ಸಚಿವರು, ಕೂಡಲೇ ಈ ಚಾರಣ ಪಥದಲ್ಲಿ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಮಾಡಿ, ಚಾರಣಿಗರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ಸೂಚನೆ ನೀಡಿದರು.
ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಅರಣ್ಯ ಸಿಬ್ಬಂದಿಯ ಕುಂದುಕೊರತೆ ಆಲಿಸಿದರು.