20.6 C
Karnataka
Wednesday, November 27, 2024

ತಣ್ಣೀರುಬಾವಿ: ಆಮೆ ಮೊಟ್ಟೆ ರಕ್ಷಣಾ ಸ್ಥಳಕ್ಕೆ ಅರಣ್ಯ ಸಚಿವರ ಭೇಟಿ

ಮಂಗಳೂರು:ಮಂಗಳೂರಿನ ತಣ್ಣೀರುಬಾವಿ ಕಡಲ ತೀರದಲ್ಲಿ ಅರಣ್ಯ ಇಲಾಖೆ ಸಂರಕ್ಷಣೆ ಮಾಡಿರುವ ಆಲೀವ್ ರೆಡ್ ಲೇ ಆಮೆಯ ಮೊಟ್ಟೆಗಳ ಸ್ಥಳವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪರಿಶೀಲನೆ ಮಾಡಿದರು.


ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದಲ್ಲಿರುವ ಸಚಿವರು ಸೋಮವಾರ ತಡರಾತ್ರಿ ತಣ್ಣೀರು ಬಾವಿ ಅತಿಥಿ ಗೃಹಕ್ಕೆ ವಿಶ್ರಾಂತಿಗೆ ಆಗಮಿಸಿದಾಗ, ಅಧಿಕಾರಿಗಳು ತಣ್ಣೀರುಬಾವಿ ಬೀಚ್ ನಲ್ಲಿ ಅಪರೂಪದ ಆಲೀವ್ ರೆಡ್ ಲೇ ಆಮೆ 1985ರ ಬಳಿಕ ಇದೇ ಮೊದಲ ಬಾರಿಗೆ ಸಾವಿರಾರು ಮೊಟ್ಟೆ ಇಟ್ಟಿದ್ದು, ಇದನ್ನು ಸಂರಕ್ಷಿಸಿರುವುದಾಗಿ ತಿಳಿಸಿದರು. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಚಿವರು ಪರಿಶೀಲಿಸಿ, ಈ ಮೊಟ್ಟೆಗಳು ಮರಿಯಾದ ಬಳಿಕ ಸುರಕ್ಷಿತವಾಗಿ ಕಡಲಿಗೆ ಬಿಡುವಂತೆ ಸೂಚಿಸಿದರು.
ಈ ಅಪರೂಪದ ಆಮೆಗಳ ಮೊಟ್ಟೆ ನಾಯಿ ಮತ್ತು ಪಕ್ಷಿಗಳ ಪಾಲಾಗದಂತೆ ಸುತ್ತಲೂ ಕಟ್ಟೆ ಕಟ್ಟಿ ಸಂರಕ್ಷಿಸಿರುವ ಅರಣ್ಯ ಸಿಬ್ಬಂದಿಯ ಕಾಳಜಿ ಮತ್ತು ತಣ್ಣೀರು ಬಾವಿ ಕಡಲ ತೀರವನ್ನು ಅತ್ಯಂತ ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಅವರ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್, ಕೆ.ಎಸ್.ಡಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಕಮಲಾ ಕರಿಕಾಳನ್ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles