ಮಂಗಳೂರು: “ರವಿಕೆ ಪ್ರಸಂಗ” ಕನ್ನಡ ಸಿನಿಮಾ ಫೆ.16ಕ್ಕೆ ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ ಎ೦ದು ಸಿನಿಮಾದ ನಿರ್ದೇಶಕ ಸಂತೋಷ್ ಕೊಡಂಕೇರಿ ಮಾಹಿತಿ ನೀಡಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಒಬ್ಬ ಟೈಲರ್ ಅ೦ಗಡಿಯಿಂದ ಆರಂಭವಾದ ಈ ರವಿಕೆ ಪುಸಂಗ ಕೋರ್ಟ್ ಮೆಟ್ಟಿಲೇರಿದಾಗ ಅದಕ್ಕೆ ಸಮಾಜ ಹೆಣ್ಣನ್ನು ನೋಡುವ ಪರಿಯೇ ಈ ಚಿತ್ರದ ಎಳೆಯಾಗಿದೆ ಜನರು ಖಂಡಿತ ಸಿನಿಮಾ ಮೆಚ್ಚುತ್ತಾರೆ ಎಂಬ ವಿಶ್ವಾಸವಿದೆ” ಎಂದವರು ಮಾಹಿತಿ ನೀಡಿದರು.
ಚಿತ್ರದ ನಾಯಕಿ ಗೀತಾ ಭಾರತಿ ಭಟ್ ಅವರುಮಾತನಾಡಿ , ಚಿತ್ರದ ಕಥೆ ದಕ್ಷಿಣ ಕನ್ನಡದ ಒಂದು ಹಳ್ಳಿಯಲ್ಲಿ ನಡೆಯುತ್ತದೆ. ಈ ಹಳ್ಳಿಯಲ್ಲಿ ಚಿತ್ರದ ನಾಯಕಿ ‘ಸಾನ್ವಿ’ ಅವಳ ಚಿಕ್ಕ ಕುಟುಂಬದ ಜೊತೆಗೆ ಇರುತ್ತಾಳೆ. ಅವಳು 28 ವರ್ಷ ವಯಸ್ಸಿನ ಹುಡುಗಿಯಾಗಿದ್ದು, ಈಗಾಗಲೇ ಅವಳಿಗೆ ಸಾಕಷ್ಟು ಮದುವೆ ಸಂಬಂಧಗಳು ಬಂದಿದ್ದರೂ ಯಾವುದೇ ಸಂಬಂಧಗಳು ಅವಳಿಗೆ ಸರಿಯಾಗಿರುವುದಿಲ್ಲ.ಸಾನ್ವಿ ಮದುವೆಯಾಗಲು ಒಬ್ಬ ಸುಂದರವಾದ ಹುಡುಗನನ್ನು ಹುಡುಕುತ್ತಿರುತ್ತಾಳೆ. ಅವಳ ಮನೆಯವರು ಕೂಡ ಅವಳಿಗೆ ಬೇಗ ಮದುವೆ ಮಾಡಬೇಕು ಎಂಬ ಯೋಚನೆಯಲ್ಲಿರುತ್ತಾರೆ.ಎಷ್ಟೋ ಸಂಬಂಧಗಳಿಂದ ತಿರಸ್ಕರಿಸಲ್ಪಟ್ಟ ಸಾನ್ವಿಗೆ ಈ ಬಾರಿ ಒಂದು ಫಾರಿನ್ ಪ್ರಪೋಸಲ್ ಬರುತ್ತದೆ. ಈ ವೇಳೆ ರವಿಕೆ ಹೊಲಿಯಲು ಕೊಡುವಲ್ಲಿಂದ ಸಿನಿಮಾ ಆರಂಭಗೊಂಡು ಕೋರ್ಟ್ ಮೆಟ್ಟಿಲು ಹತ್ತುತ್ತದೆ. ಕೊನೆಗೆ ಒಳ್ಳೆಯ ಸಂದೇಶದೊಂದಿಗೆ ಸಿನಿಮಾ ಮುಕ್ತಾಯವಾಗುತ್ತದೆ” ಎಂದು ಹೇಳಿದರು.
ರಘು ಪಾಂಡೇಶ್ವರ ಅವರು,ಮಾತನಾಡಿ “ರವಿಕೆ ಪ್ರಸಂಗ ಸಿನಿಮಾ ಜನಸಾಮಾನ್ಯರಿಗೆ ಹತ್ತಿರವಾಗುವ ಸಿನಿಮಾ. ಇದರಲ್ಲಿ ನಟಿಸುವಾಗ ತುಂಬಾನೇ ಎಂಜಾಯ್ ಮಾಡಿದ್ದೇವೆ. ಒಂದೊಳ್ಳೆ ಸಬ್ಜೆಕ್ಟ್ ಇಟ್ಟುಕೊಂಡು ಸಿನಿಮಾ ಮಾಡಿದ್ದು ಪ್ರೀಮಿಯರ್ ಶೋ ವೀಕ್ಷಿಸಿದ ಜನರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಇದು ನಮಗೆ ಹೆಚ್ಚಿನ ಬಲ ತುಂಬಿದ್ದು ಸಿನಿಮಾ ಪ್ರೇಮಿಗಳಿಗೆ ಖಂಡಿತ ನಿರಾಸೆ ಹುಟ್ಟಿಸುವುದಿಲ್ಲ. ಎಲ್ಲರೂ ಫೆ.16ರಂದು ಸಿನಿಮಾ ಮಂದಿರಕ್ಕೆ ಹೋಗಿ ಸಿನಿಮಾ ನೋಡಿ ನಮ್ಮನ್ನು ಪ್ರೋತ್ಸಾಹಿಸಿ” ಎಂದರು.
ಚಿತ್ರಕ್ಕೆ ಕಥೆ ಮತ್ತು ಸಂಭಾಷಣೆ ಬರೆದಿರುವ ಪಾವನಾ ಸಂತೋಷ್ ಮಾತಾಡಿ, “ಎಲ್ಲಾ ವರ್ಗದ ಜನರನ್ನು ಮುಟ್ಟುವಂತಹ ಒಂದೊಳ್ಳೆ ಸಿನಿಮಾ ಮಾಡಿದ್ದೇವೆ. ಎಲ್ಲರೂ ಸಿನಿಮಾ ನೋಡಿ, ಕುಟುಂಬ ಸಮೇತರಾಗಿ ವೀಕ್ಷಿಸಬಲ್ಲ ಒಂದೊಳ್ಳೆ ಮೆಸೇಜ್ ಇರುವ ಸಿನಿಮಾ” ಎಂದರು.ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಜೊತೆಗೆ ರಕ್ಷಕ್ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರದ ತಾರಾಗಣದಲ್ಲಿ ಗೀತಾ ಭಾರತಿ ಭಟ್, ಸುಮನ್ ರಂಗನಾಥ್, ರಾಕೇಶ್ ಮಯ್ಯ, ಸಂಪತ್ ಮೈತ್ರೇಯ, ಪದ್ಮಜಾ ರಾವ್, ಕೃಷ್ಣಮೂರ್ತಿ ಕವತಾರ್, ಪ್ರವೀಣ್ ಅಥರ್ವ, ರಘು ಪಾಂಡೇಶ್ವರ್, ಹನುಮಂತೇ ಗೌಡ, ಖುಷಿ ಆಚಾರ್, ಹನುಮಂತ್ ರಾವ್ ಕೆ. ಇರಲಿದ್ದಾರೆ. ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿಯಲ್ಲಿ ಸಿನಿಮಾ ತಯಾರಾಗಿದೆ.