26.5 C
Karnataka
Wednesday, April 16, 2025

ಹರಿಹರ ಕೊಲ್ಲಮೊಗರು: ಪತ್ರಕರ್ತರ ಗ್ರಾಮ ವಾಸ್ತವ್ಯ

ಸುಳ್ಯ: ಗ್ರಾಮದ ಜನರಿಗೆ ಸರಕಾರಿ ಕಚೇರಿಗಳಿಗೆ ಹೋಗಿ ತಮ್ಮ ಕೆಲಸ ಕಾರ್ಯವನ್ನು ಮಾಡಲು ಕಷ್ಟವಾಗುವ ಇಂತ ದಿನದಲ್ಲಿ ಗ್ರಾಮದ ಒಂದೇ ವೇದಿಕೆಯಲ್ಲಿ ಎಲ್ಲಾ ಅಧಿಕಾರಿಗಳು ಕುಳಿತು ಸಮಸ್ಯೆ ಪರಿಹರಿಸುವಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ‌ ಬರೆದಿರುವುದು ಶ್ಲಾಘನೀಯ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ದ.ಕ.ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಆಡಳಿತ, ಹರಿಹರ ಕೊಲ್ಲಮೊಗರು ಗ್ರಾಮ ಪಂಚಾಯತ್ ಮತ್ತು‌ ಸ್ಥಳೀಯ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೊಲ್ಲಮೊಗ್ರದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಕೊಲ್ಲಮೊಗ್ರ, ಹರಿಹರ ಗ್ರಾಮಗಳು ಗಡಿಪ್ರದೇಶ. ಕಳೆದ ಬಾರಿ‌ ಪ್ರಳಯ ಬಂದು ಇಲ್ಲಿನ ಜನರು ತುಂಬಾ ತೊಂದರೆಗೊಳಗಾಗಿದ್ದಾರೆ. ಇಲ್ಲಿರುವ ಈ ನೈಜ್ಯ ಸಮಸ್ಯೆಗಳನ್ನು ಅಧಿಕಾರಿಗಳು ಅರಿತು ಪರಿಹಾರ ಒದಗಿಸಬೇಕು. ಜನಸ್ನೇಹಿ ಕೆಲಸಗಳು ಆಗಬೇಕು ಎಂದರು.
ದ.ಕ. ಜಿಲ್ಲಾಧಿಕಾರಿ ‌ಮುಲ್ಲೈ ಮುಗಿಲನ್ ಮಾತನಾಡಿ, ಭಾಗದ ಕಷ್ಟಗಳ ಅರಿವಾಗಿದೆ. ಇಲ್ಲಿ ಬಂದಿರುವ ಅರ್ಜಿಗಳಲ್ಲಿ ಶೇ.70 ರಷ್ಟು ಅರ್ಜಿಗಳು ಭೂದಾಖಲೆ, ಹಕ್ಕು ಪತ್ರ ವಿಷಯಕ್ಕೆ ಸಂಬಂಧಿಸಿದ್ದು ಇದೆ. ಭಾಗಶಃ ಅರಣ್ಯ ಸಮಸ್ಯೆ ಹೆಚ್ಚಿರುವುದರಿಂದ ಇದನ್ನು ಆದ್ಯತೆಯಲ್ಲಿ ತೆಗೆದುಕೊಂಡು ಸರ್ವೆ ನಡೆಸಿ ಗಡಿ ಗುರುತು ಮಾಡಲಾಗುವುದು. ಕೊಲ್ಲಮೊಗ್ರ, ಹರಿಹರ ಭಾಗದಲ್ಲಿ ಪೈಲಟ್ ಯೋಜನೆಯಾಗಿ ಇದನ್ನು ಕಾರ್ಯಗತ ಮಾಡಲಾಗುವುದು ಎಂದು ಹೇಳಿದರು.


ಅಡಿಕೆ ಎಲೆ ಹಳದಿ ರೋಗ ಬಾದಿತ ಪ್ರದೇಶಗಳಲ್ಲಿ ಪರ್ಯಾಯ ಬೆಳೆ ಬೆಳೆಯಲು ಆದ್ಯತೆ ನೀಡಬೇಕು. ಇದಕ್ಕೆ ಇಲಾಖೆಗಳಿಂದ ಸಹಕಾರ ಪಡೆಯಲು ಅವಕಾಶ ಇದೆ. ಕೃಷಿಕರು ಪ್ರಯೋಜನ ಪಡೆದುಕೊಳ್ಳಬೇಕು ಎಂದು‌ ಜಿಲ್ಲಾಧಿಕಾರಿಗಳು ಹೇಳಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮುಂದಿರಿಸಿದ ವಿವಿಧ ಸಮಸ್ಯೆಗಳ ಕುರಿತ ಅರ್ಜಿಗಳಿಗೆ ಅವರು ಪರಿಹಾರದ ಭರವಸೆ ನೀಡಿದರು.
ದ.ಕ.ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಡಿ.ಎಫ್. ಒ. ಆಂಥೋನಿ ಮರಿಯಪ್ಪ,ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ,
ಸುಳ್ಯ ತಾ.ಪಂ. ಇ.ಒ. ರಾಜಣ್ಣ, ತಹಶೀಲ್ದಾರ್ ಮಂಜುನಾಥ್ ಜಿ, ಹರಿಹರ – ಕೊಲ್ಲಮೊಗ್ರ ಸಹಕಾರ ಸಂಘದ ಅಧ್ಯಕ್ಷ ಬಿ.ಎಸ್. ಹರ್ಷ ಕುಮಾರ್ ದೇವಜನ, ಹರಿಹರ ಗ್ರಾ.ಪಂ. ಅಧ್ಯಕ್ಷ ವಿಜಯ ಅಂಙಣ, ಕೊಲ್ಲಮೊಗ್ರ ಗ್ರಾ.ಪಂ. ಅಧ್ಯಕ್ಷೆ ಜಯಶ್ರೀ ಚಾಂತಾಳ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಮಹಾರಾಷ್ಟ್ರ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಪ್ರಧಾನ ಕಾರ್ಯದರ್ಶಿ ರಾಜೇಶ್, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವೇದಿಕೆಯಲ್ಲಿ ಇದ್ದರು.
ಬಂಗ್ಲೆಗುಡ್ಡೆ ಶಾಲಾ‌ವಿದ್ಯಾರ್ಥಿಗಳು ಪ್ರಾರ್ಥಿಸಿದರು.


ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.
ಪತ್ರಕರ್ತರಾದ ಬಾಲಕೃಷ್ಣ ಭೀಮಗುಳಿ ಕಾರ್ಯಕ್ರಮ ನಿರೂಪಿಸಿದರು.
ಪೈಲಟ್ ಯೋಜನೆ’
ಸುಳ್ಯ:ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಭಾಗಷಃ ಅರಣ್ಯ ಸಮಸ್ಯೆ ಸೇರಿ ಅರಣ್ಯ – ಕಂದಾಯ ನಡುವಿನ ಸಮಸ್ಯೆ ಇದೆ. ಇದರ ಪರಿಹಾರಕ್ಕೆ ಇಲ್ಲಿ ಪೈಲಟ್ ಯೋಜನೆಯಡಿಯಲ್ಲಿ ಸರ್ವೆ ಮಾಡಿಸಿ ಇಲ್ಲಿನ ಅರಣ್ಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇವೆ. 3-4 ತಿಂಗಳ ಯೋಜನೆ ಅಡಿಯಲ್ಲಿ ಸರ್ವೆ ಪೂರ್ತಿ ಮಾಡಲಾಗುವುದು. ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.
ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಗ್ರಾಮಸ್ಥರಿಂದ ಸಂವಾದ ಕಾರ್ಯಕ್ರಮದಲ್ಲಿ ಅವರು ಅಹವಾಲು ಆಲಿಸಿ ಮಾತನಾಡಿದರು. ಪೈಲಟ್ ಯೋಜನೆಯಡಿ ಇಲ್ಲಿನ ಭಾಗಷಃ ಅರಣ್ಯ ಸಮಸ್ಯೆ ಪರಿಹರಿಸಲಾಗುವುದು. ಬಳಿಕ ಇಲ್ಲಿನ ಇತರೆ ಸಮಸ್ಯೆಗಳ ಪರಿಹಾರಕ್ಕೂ ಇದು ಪೂರಕವಾಗಲಿದೆ ಎಂದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles