17.9 C
Karnataka
Saturday, November 23, 2024

ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಮುಂದೆ ಪ್ರತಿಭಟನೆ

ಮ೦ಗಳೂರು: ಧರ್ಮ ಸೂಕ್ಷ್ಮತೆಯನ್ನು ಮರೆತು ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಬಗ್ಗೆ ಮುಗ್ಧ ವಿದ್ಯಾರ್ಥಿಗಳ ಮುಂದೆ ಅವಹೇಳನಕಾರಿಯಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿದ ಶಿಕ್ಷಕಿಯ ನಡೆ ಖಂಡನೀಯವಾಗಿದ್ದು, ಘಟನೆ ತೀವ್ರ ಸ್ವರೂಪ ಪಡೆದಿದ್ದರೂ ಸಂತ ಜೆರೋಸಾ ಶಿಕ್ಷಣ ಸಂಸ್ಥೆ ಇಂತಹ ಶಿಕ್ಷಕಿಯನ್ನು ರಕ್ಷಿಸಲು ಯತ್ನಿಸಿದ್ದು ಅತ್ಯಂತ ಹೇಯ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರು ಉತ್ತರದ ಶಾಸಕ ಭರತ್ ಶೆಟ್ಟಿ, ವಿದ್ಯಾರ್ಥಿಗಳ ಪೋಷಕರು, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಿಂದೂ ಸಂಘಟನೆಗಳ ಪ್ರಮುಖರು ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಮುಂದೆ ನಡೆಸಿದ ಪ್ರತಿಭಟನೆಯಲ್ಲಿ ಬಿಇಒ ಅವರು ಕೂಡಲೇ ಶಾಲೆಗೆ ಭೇಟಿ ನೀಡಬೇಕು, ತಪ್ಪಿತಸ್ಥ ಶಿಕ್ಷಕರನ್ನು ಅಮಾನತುಗೊಳಿಸಲೇಬೇಕು ಮತ್ತು ಶಾಲೆಯ ಮಾನ್ಯತೆಯನ್ನು ರದ್ದುಪಡಿಸಲು ಶಿಫಾರಸು ಮಾಡಬೇಕೆಂದು ಶಾಸಕರು ಪಟ್ಟು ಹಿಡಿದರು.
ಬೆಳಿಗ್ಗೆಯಿಂದ ಸಂಜೆಯವರೆಗೂ ನಡೆದ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಸಂಜೆ ಶಾಲೆಯಿಂದ ಹೊರಬಂದ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಸೇರಿ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡಿದ ಶಾಸಕ ಕಾಮತ್ ಅವರ ಸುತ್ತ ನಿಂತು ಜೈ ಶ್ರೀರಾಮ್ ಘೋಷಣೆ ಮೊಳಗಿಸಿ ಮಾಧ್ಯಮಗಳ ಮುಂದೆ ತಮಗಾದ ನೋವನ್ನು ಹೇಳಿಕೊಂಡರು .ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್ ಅವರು ಸಂಪೂರ್ಣ ಘಟನೆಯ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರ ಮನವೊಲಿಸಲು ಯತ್ನಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles