ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ಗಳ ಸುರಕ್ಷತೆಗೆ ಸಂಬಂಧಿಸಿದಂತೆ, ಜ.13 ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ. ಅವರ ಉಪಸ್ಥಿತಿಯಲ್ಲಿ ಎಲ್ಲಾ ಬ್ಯಾಂಕ್ ಮುಖ್ಯಸ್ಥರು ಗಳೊಂದಿಗೆ ಸಭೆಯನ್ನು ನಡೆಸಲಾಯಿತು.
ಬ್ಯಾಂಕ್ ಗಳ ಸುರಕ್ಷತೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಳ್ಳುವಂತೆ ಸಭೆಯಲ್ಲಿ ಸೂಚನೆ ನೀಡಲಾಯಿತು. ಸಭೆಯಲ್ಲಿ ನೀಡಲಾಗಿರುವ ಸೂಚನೆಗಳನ್ನು, ಮುಂದಿನ 20 ದಿನಗಳ ಒಳಗಾಗಿ ಬ್ಯಾಂಕ್ ಗಳು ಅಳವಡಿಸಿಕೊಂಡಿರುವ ಬಗ್ಗೆ, ಆಯಾ ಠಾಣಾ ವ್ಯಾಪ್ತಿಯ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು, ಖುದ್ದಾಗಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.