16.7 C
Karnataka
Saturday, November 23, 2024

ಹಿರಿಯ ಕಾದಂಬರಿಕಾರ, ಭಾಷಾತಜ್ಞ ಕೆ.ಟಿ.ಗಟ್ಟಿ ವಿಧಿವಶ

ಮ೦ಗಳೂರು:ಕರ್ನಾಟಕ ಸಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಖ್ಯಾತ ಕಾದಂಬರಿಕಾರ,ಪ್ರಾಧ್ಯಾಪಕ ಕೆ.ಟಿ.ಗಟ್ಟಿ ಅಸೌಖ್ಯದಿಂದ ಸೋಮವಾರ ನಿಧನ ಹೊಂದಿದರು.

ಮೂಲತ ಕಾಸರಗೋಡಿನ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ ಪ್ರಾಧ್ಯಾಪಕರಾಗಿ ದುಡಿದವರು. ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು.ಕೆ ಟಿ ಗಟ್ಟಿಯವರು ಕಾಸರಗೋಡಿನ ಹೈಯರ್ ಎಲಿಮೆಂಟರಿ ಶಾಲೆಯಲ್ಲಿ ಕ್ರಮಬದ್ಧವಾಗಿ ಕಲಿತದ್ದು ಎಂಟನೆಯ ತರಗತಿಯವರೆಗೆ ಮಾತ್ರ. ಎಸ್‌.ಎಸ್‌.ಎಲ್‌.ಸಿ.ಯಲ್ಲಿ ಉತ್ತೀರ್ಣರಾದ ನಂತರ ಕಾಸರಗೋಡಿನ ಚಳುವಳಿಯಲ್ಲಿ ಭಾಗಿಯಾದರು . ನಂತರ ಪಿ.ಯು. ಹಾಗೂ ಬಿ.ಎ. ಪದವಿಗಳನ್ನು ಕೇರಳ ವಿಶ್ವವಿದ್ಯಾಲಯದಿಂದ ಪಡೆದರು. ಎರಡು ವರ್ಷಗಳ ಶಿಕ್ಷಕರ ತರಬೇತಿ ಪಡೆದದ್ದು ಮಾಯಿಪ್ಪಾಡಿಯ ಸರಕಾರಿ ಬೇಸಿಕ್‌ ಟ್ರೈನಿಂಗ್‌ ಶಾಲೆಯಿಂದ. ತಲಚೇರಿಯ ಸರಕಾರಿ ಟ್ರೈನಿಂಗ್‌ ಕಾಲೇಜಿನಿಂದ ಒಂದು ವರ್ಷದ ಬಿ.ಎಡ್‌. ಪದವಿ ಪಡೆದ ಗಟ್ಟಿಯವರು ಶಿಕ್ಷಕರಾಗಿ ಸೇರಿದ್ದು ಕಾಸರಗೋಡಿದ ಸರಕಾರಿ ಪ್ರೌಢಶಾಲೆಯಲ್ಲಿ. ಬಿಡುವಿನ ವೇಳೆಯಲ್ಲಿ ಖಾಸಗಿಯಾಗಿ ಕುಳಿತು ಕೇರಳ ವಿಶ್ವವಿದ್ಯಾಲಯದಿಂದ ಇಂಗ್ಲಿಷ್‌ ಸ್ನಾತಕೋತ್ತರ ಪದವಿ ಪಡೆದರು. ೧೯೬೮ರಲ್ಲಿ ಮಣಿಪಾಲದ ಎಂ.ಐ.ಟಿ. ಸಂಸ್ಥೆ ಸೇರಿ ಆರು ವರ್ಷಗಳ ಕಾಲ ಇಂಗ್ಲಿಷ್‌ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದರ ಜೊತೆಗೆ ಒಂದು ವರ್ಷ ಉಡುಪಿಯ ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದಲ್ಲೂ ಅಧ್ಯಾಪಕರಾಗಿ ಸೇವೆಸಲ್ಲಿಸಿದರು. ಭಾರತ ಸರಕಾರದಿಂದ ಪ್ರಾಧ್ಯಾಪಕರಾಗಿ ನಿಯುಕ್ತರಾಗಿ ಇಥಿಯೋಪಿಯಾದಲ್ಲಿರುವಾಗಲೇ ಲಂಡನ್ನಿನ ಟ್ರಿನಿಟಿ ಕಾಲೇಜಿನಿಂದ ಇಂಗ್ಲಿಷ್‌ ಕಲಿಕೆಯಲ್ಲಿ ಡಿಪ್ಲೊಮ ಮತ್ತು ಆಕ್ಸ್ಫರ್ಡಿನ ಕಾಲೇಜ್‌ ಆಫ್‌ ಪ್ರಿಸೆಪ್ಟರ್ಸ್‌ನಿಂದ ಡಿಪ್ಲೊಮ ಪಡೆದರು.

ಕೆಲಕಾಲ ಇಥಿಯೋಪಿಯಾದಲ್ಲಿದ್ದು ೧೯೮೨ರಲ್ಲಿ ಸ್ವದೇಶಕ್ಕೆ ಮರಳಿಬಂದ ಗಟ್ಟಿಯವರು ಪೂರ್ಣಾವಧಿ ಲೇಖಕರಾಗಿ ಬದುಕಲು ನಿರ್ಧರಿಸಿ, ದ.ಕ. ಜಿಲ್ಲೆಯ ಉಜಿರೆಯ ಬಳಿ ಜಮೀನು ಖರೀದಿಸಿ ‘ವನಸಿರಿ’ ಯಲ್ಲಿ ಕೃಷಿ, ಸಾಹಿತ್ಯ ಕೃಷಿ ಎರಡರಲ್ಲೂ ತೊಡಗಿಸಿಕೊಂಡಿದ್ದರು. ನಲವತ್ತಕ್ಕೂ ಹೆಚ್ಚು ಕಾದಂಬರಿ, ಕಥಾ ಸಂಕಲನ, ಕವಿತೆ, ವೈಚಾರಿಕ ಬರಹಗಳು, ಭಾಷೆಯ ಬಗೆಗೆ ಗಟ್ಟಿಯವರು ಹಲವಾರು ಪುಸ್ತಕಗಳನ್ನು ಬರೆದಿದ್ದು ಅನನ್ಯವೆನಿಸಿದೆ.
.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles