16.7 C
Karnataka
Saturday, November 23, 2024

ಫೆ.25ರಂದು‌ ಯಕ್ಷಗಾನ ಅಂಚೆಚೀಟಿ ಬಿಡುಗಡೆ

ಮಂಗಳೂರು: ಭಾರತೀಯ ಅಂಚೆ ಇಲಾಖೆ ಮತ್ತು ಎಂ.ಆರ್.ಪಿ.ಎಲ್ ಸಹಭಾಗಿತ್ವದಲ್ಲಿ ಯಕ್ಷಗಾನ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ ಫೆ.25ಕ್ಕೆ ರಂದು‌ ಬೆಳಗ್ಗೆ 1೦ ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ಸಂಸದ ನಳಿನ್ ಕುಮಾರ್ ಕಟೀಲ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಂಗಳೂರು ಕರ್ನಾಟಕ ವೃತ್ತ ಪೋಸ್ಟ್ ಮಾಸ್ಟರ್ ಜನರಲ್ ಎಸ್ . ರಾಜೇಂದ್ರ ಕುಮಾರ್ ಅಂಚೆ ಚೀಟಿ ಬಿಡುಗಡೆಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಡಿ. ವೇದವ್ಯಾಸ್‌ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು , ಖ್ಯಾತ ಯಕ್ಷಗಾನ ವಿಮರ್ಶಕ ಡಾ. ಎಂ. ಪ್ರಭಾಕರ ಜೋಶಿ, ದಕ್ಷಿಣ ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಎಲ್.ಕೆ. ಡ್ಯಾಶ್ ಹಾಗೂ ಎಂ.ಆರ್.ಪಿ.ಎಲ್.ನ ಕಾರ್ಯನಿರ್ವಾಹಕ ನಿರ್ದೇಶಕ ಮುಂಡೂರು ಶ್ಯಾಮಪ್ರಸಾದ್ ಕಾಮತ್ ಅವರು ಭಾಗವಹಿಸಲಿದ್ದಾರೆ ಎಂದರು.
ಸರಪಾಡಿ ಅಶೋಕ್ ಶೆಟ್ಟಿ ಮಾತನಾಡಿ, ಸಂಸದ ನಳಿನ್ ಕುಮಾರ್ ಕಟೀಲು ಅವರ ಪ್ರಯತ್ನದ ಫಲವಾಗಿ ಕರ್ನಾಟಕ ಕರಾವಳಿಯ ಶ್ರೇಷ್ಠ ಕಲೆ ಯಕ್ಷಗಾನದ ಅಂಚೆ ಚೀಟಿ ಬಿಡುಗಡೆಗೊಳ್ಳುತ್ತಿರುವುದು ಯಕ್ಷಗಾನ ಕಲಾವಿದರಿಗೆ ಹಾಗೂ ಕಲಾಭಿಮಾನಿಗಳಿಗೆ ಸಂದ ಗೌರವ . ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮದ ಪ್ರಯುಕ್ತ ಸಭಾ ಕಾರ್ಯಕ್ರಮದ ಬಳಿಕ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರ ಕೊಡುವಿಕೆಯಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ ‘ ಲೋಕಾಭಿರಾಮ ‘ ಯಕ್ಷಗಾನ ಪ್ರದರ್ಶನ ಜರುಗಲಿದೆ ಎಂದು ತಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮ೦ಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಪದಾಧಿಕಾರಿ ಕದ್ರಿ ನವನೀತ ಶೆಟ್ಟಿ , ಯಕ್ಷಧ್ರುವ – ಯಕ್ಷಶಿಕ್ಷಣ ಯೋಜನೆಯ ಪ್ರಧಾನ ಸಂಚಾಲಕ ಪಣಂಬೂರು ವಾಸುದೇವ ಐತಾಳ , ಯಕ್ಷಗಾನ ಗುರು ದೀವಿತ್ ಎಸ್.ಕೆ.ಪೆರಾಡಿ ಉಪಸ್ಥಿತರಿದ್ದರು .

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles