ಮಂಗಳೂರು: ಇಲ್ಲಿನ ಕರಾವಳಿ ಉತ್ಸವ ಮೈದಾನದಲ್ಲಿ ಮಾ.7ರ ಗುರುವಾರ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು
ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್ ಅವರು ಉದ್ಘಾಟಿಸಿದರು.
ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಸಿಇಒ ಡಾ. ಆನಂದ್,
ಮೂಡದ ನೂತನ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ಮೆಸ್ಕಾಂ ಎಂಡಿ ಪದ್ಮಾವತಿ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಆನಂದ್, ಮಂಗಳೂರು ತಹಶೀಲ್ದಾರರಾದ ಪ್ರಶಾಂತ್ ವಿ ಪಾಟೀಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಗಟ್ಟಿ, ಕಾರ್ಪೊರೇಟರ್ ಗಳು ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾವಿರಾರು ಗ್ಯಾರಂಟಿ ಫಲಾನುಭವಿಗಳು ಉಪಸ್ಥಿತರಿದ್ದರು.