ಮಂಗಳೂರು: ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮಾರ್ಚ್ 9 ರಂದು ಶನಿವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಮಧ್ಯಾಹ್ನ 2.10ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 4.30 ಗಂಟೆಗೆ ತೊಕ್ಕೊಟ್ಟು ಕಲ್ಲಾಪುವಿನ ಯುನಿಟಿ ಹಾಲ್ನಲ್ಲಿ ನಡೆಯಲಿರುವ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ರಾತ್ರಿ 8.10 ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮಾರ್ಚ್ 9 ಮತ್ತು 10 ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಮಾರ್ಚ್ 9 ರಂದು ಶನಿವಾರ ಸಂಜೆ 4.35 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 5 ಗಂಟೆಗೆ ನಗರದ ಸಕ್ರ್ಯೂಟ್ ಹೌಸ್ ಆವರಣದಲ್ಲಿ ಸಕ್ರ್ಯೂಟ್ ಹೌಸ್ನ ನೂತನ ಕಟ್ಟಡ ಶಿಲನ್ಯಾಸ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. 5.45 ಕ್ಕೆ ತೊಕ್ಕೊಟ್ಟು ಕಲ್ಲಾಪುವಿನ ಯೂನಿಟಿ ಹಾಲ್ನಲ್ಲಿ ಉಳ್ಳಾಲ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಭಾಗವಹಿಸುವರು.
ಮಾರ್ಚ್ 10 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಸುಳ್ಯದ ಅಮರ ಜ್ಯೋತಿಯಲ್ಲಿ ಸುಳ್ಯ ತಾಲೂಕು ಮಟ್ಟದ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಕಡಬದ ಸೆಂಟ್ ಜೋಕಿಮ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಡಬ ತಾಲೂಕು ಮಟ್ಟದ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ, ಸಂಜೆ 4.30 ಕ್ಕೆ ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿ ಮೂಡಬಿದ್ರೆ ತಾಲೂಕು ಮಟ್ಟದ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. 5.20ಕ್ಕೆ ಶಿರ್ತಾಡಿ ಬಸ್ಸು ತಂಗುದಾಣದ ಶಿಲನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ರಾತ್ರಿ 8.10ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.