26.3 C
Karnataka
Saturday, November 23, 2024

ಮಂಗಳೂರು ಸೆಂಟ್ರಲ್- ತಿರುವನಂತಪುರಂ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ

ಮಂಗಳೂರು :ಮಂಗಳೂರು ಸೆಂಟ್ರಲ್- ಕಾಸರಗೋಡು- ತಿರುವನಂತಪುರಂ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಮ೦ಗಳವಾರ ಚಾಲನೆ ನೀಡಿದರು.
ಇದೇ ಸ೦ದಭ೯ದಲ್ಲಿ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಜರಗಿದ ಕಾಯ೯ಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಿದರು.ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀ ನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಾಲ್ಘಾಟ್ ವಿಭಾಗದ ಡಿಆರ್ ಎಂ ಅರುಣ್ ಕುಮಾರ್ ಚತುರ್ವೇದಿ, ಎಡಿಆರ್ ಎಂ ಎಸ್. ಜಯಕೃಷ್ಣನ್, ಮನಪಾ ಸದಸ್ಯರು , ರೈಲ್ವೇ ಬಳಕೆದಾರರು, ಕೆಸಿಸಿಐ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಮಂಗಳೂರು-ತಿರುವನಂತಪುರಂ ನಡುವಿನ ವಂದೇ ಭಾರತ್ ರೈಲು ಬುಧವಾರ ಹೊರತು ಪಡಿಸಿ ವಾರ ಆರು ದಿನ ಸಂಚರಿಸಲಿದೆ. ಮಂಗಳೂರಿನಿಂದ ಬೆಳಗ್ಗೆ 6.15ಕ್ಕೆ ಹೊರಟು ಮಧ್ಯಾಹ್ನ 3.05ಕ್ಕೆ ತಿರುವನಂತಪುರ ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05ಕ್ಕೆ ಹೊರಟು ರಾತ್ರಿ 12.40ಕ್ಕೆ ಮಂಗಳೂರು ತಲುಪಲಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles