17.9 C
Karnataka
Saturday, November 23, 2024

ಲೋಕಸಭಾ ಚುನಾವಣೆ: ಬಿಜೆಪಿ 2 ನೇ ಪಟ್ಟಿ ಪ್ರಕಟ; ದ.ಕನ್ನಡಕ್ಕೆ ಚೌಟ; ಉಡುಪಿಗೆ ಕೋಟ

ಮ೦ಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 2 ನೇ ಪಟ್ಟಿ ಬಿಡುಗಡೆ ಮಾಡಿದ್ದು ದ.ಕನ್ನಡಕ್ಕೆ ಬಿಜೆಪಿ ರಾಜ್ಯ ಕಾಯ೯ದಶಿ೯ ಕ್ಯಾ. ಬ್ರಿಜೇಶ್ ಚೌಟ ಹಾಗೂ ಉಡುಪಿಗೆ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಲಾಗಿದೆ.


.ದ.ಕನ್ನಡದ ಹಾಲಿ ಸ೦ಸದ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಮೈಸೂರಿನ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದೆ. ಉಡುಪಿಯ ಹಾಲಿ ಸ೦ಸದೆ,ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್

ನೀಡಲಾಗಿದೆ.ಬಿಜೆಪಿ ತನ್ನ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಬಿಜೆಪಿಯ 9 ಮಂದಿ ಹಾಲಿ ಸಂಸದರಿಗೆ ಈ ಬಾರಿ ಟಿಕೇಟು ನೀಡಿಲ್ಲ.
ಬ್ರಿಜೇಶ್ ಚೌಟರಿಗೆ ಸಂಪೂರ್ಣ ಬೆಂಬಲ:ನಳಿನ್ ಕುಮಾರ್ ಕಟೀಲ್

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬ್ರಿಜೇಶ್ ಚೌಟರಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಬಿಜೆಪಿಯ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟಗೊ೦ಡ ಬಳಿಕ ನಗರದಲ್ಲಿ ಸುದ್ಧಿಗಾರರರೊ೦ದಿಗೆ ಮಾತನಾಡಿದ ಅವರು ನರೇಂದ್ರ ಮೋದಿಯವರು ಮತ್ತೆ ದೇಶದ ಪ್ರಧಾನಿಯಾಗಬೇಕು.ಕಳೆದ ಚುನಾವಣೆಯಲ್ಲಿ 2.74ಲಕ್ಷ ಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದೇನೆ.ಈ ಬಾರಿ 3ಲಕ್ಷ ಕ್ಕೂ ಅಧಿಕ ಮತಗಳಿಂದ ಬ್ರಿಜೇಶ್ ಚೌಟ ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ನನಗೆ ಪಕ್ಷದ ಕಾರ್ಯ ಕರ್ತನ ಹುದ್ದೆ ಅತ್ಯಂತ ದೊಡ್ಡದು ಎಂದು ಭಾವಿಸಿದ್ದೇನೆ.ಪಕ್ಷ ವಹಿಸುವ ಯಾವುದೇ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎ೦ದವರು ಹೇಳಿದರು.
ಬಿಜೆಪಿ 2 ನೇ ಪಟ್ಟಿ
ಬಿಜಾಪುರ- ರಮೇಶ್ ಜಿಗಜಿಣಗಿ
ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ
ಬಾಗಲಕೋಟೆ- ಪಿ.ಸಿ. ಗದ್ದಿಗೌಡರ
ಕಲಬುರಗಿ- ಉಮೇಶ್ ಜಾಧವ್
ಬೀದರ್- ಭಗವಂತ ಖೂಬಾ
ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್
ಬಳ್ಳಾರಿ- ಶ್ರೀರಾಮುಲು
ಹಾವೇರಿ- ಬಸವರಾಜ ಬೊಮ್ಮಾಯಿ
ಧಾರವಾಡ- ಪ್ರಹ್ಲಾದ್ ಜೋಶಿ
ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ- ಬಿ.ವೈ. ರಾಘವೇಂದ್ರ
ಉಡುಪಿ-ಚಿಕ್ಕಮಗಳೂರು- ಕೋಟ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟ
ತುಮಕೂರು – ವಿ. ಸೋಮಣ್ಣ
ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಚಾಮರಾಜನಗರ- ಎಸ್. ಬಸವರಾಜು
ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles