18.4 C
Karnataka
Wednesday, November 27, 2024

ಎಸ್.ಎಸ್.ಎಲ್.ಸಿ: ಸುಗಮವಾಗಿ ಪರೀಕ್ಷೆ ಬರೆಯಲು ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಮಾ.25ರಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೂಚಿಸಿದರು.
ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಎಸ್ ಎಸ್ ಎಲ್ ಸಿ 2024ರ ಪರೀಕ್ಷಾ ಸಿದ್ಧತೆ ಕುರಿತು ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಸ್.ಎಸ್.ಎಲ್. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಗಳು ಆಗಬಾರದು, ಅವರು ಸುಗಮವಾಗಿ ಪರೀಕ್ಷೆ ಬರೆಯಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಎಲ್ಲಾ ರೀತಿಯ ಅನುಕೂಲಗಳನ್ನು ಮಾಡಿಕೊಡಬೇಕು, ಮುಖ್ಯವಾಗಿ ಮಕ್ಕಳ ಓಡಾಟಕ್ಕೆ ಬಸ್ಸಿನ ತೊಂದರೆ ಆಗಬಾರದು, ಇದಕ್ಕಾಗಿ ಪ್ರತಿ ತಾಲೂಕುಗಳ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕೆ ಎಸ್ ಆರ್ ಟಿ ಸಿ ನ ಅಧಿಕಾರಿಗಳು ಚರ್ಚಿಸಿ ಪರೀಕ್ಷೆಗೆ ಅನುಕೂಲವಾಗುವಂತೆ ಬಸ್ಸಿನ ಸಮಯ, ಸಾಗುವ ಮಾರ್ಗದ ಬಗ್ಗೆ ಪಟ್ಟಿ ತಯಾರಿಸಿ ವಿದ್ಯಾರ್ಥಿಗಳ ಮಾಹಿತಿಗೆ ನೀಡಬೇಕು ಎಂದು ಹೇಳಿದರು.
ವೇಳಾಪಟ್ಟಿ: ಮಾರ್ಚ್ 25ರಿಂದ ಬೆಳಿಗ್ಗೆ 10-15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 25ರಂದು ಪ್ರಥಮ ಭಾಷೆ ಕನ್ನಡ/ಇಂಗ್ಲಿಷ್/ಸ೦ಸ್ಕ್ರತ.
ಮಾರ್ಚ್ 27ರಂದು ಸಮಾಜ ವಿಜ್ಞಾನ.
ಮಾರ್ಚ್ 30ರಂದು ರಾಜ್ಯಶಾಸ್ತ್ರ / ವಿಜ್ಞಾನ.
ಏಪ್ರಿಲ್ 2ರಂದು ಗಣಿತ /ಸಮಾಜಶಾಸ್ತ್ರ.
ಏಪ್ರಿಲ್ 3ರಂದು ಜೆ.ಟಿ.ಎಸ್ ವಿಷಯ.
ಏಪ್ರಿಲ್ 4ರಂದು ತೃತೀಯ ಭಾಷೆ ಹಿಂದಿ/ಕನ್ನಡ/ ಸಂಸ್ಕೃತ/ ಕೊಂಕಣಿ/ ತುಳು/ಎನ್ ಎಸ್ ಕ್ಯೂ ಎಫ್ ವಿಷಯಗಳು
ಎಪ್ರಿಲ್ 6ರಂದು ದ್ವಿತೀಯ ಭಾಷೆ ಇಂಗ್ಲಿಷ್ / ಕನ್ನಡ ಪರೀಕ್ಷೆಗಳು.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳ ವಿವರ: ಜಿಲ್ಲೆಯಲ್ಲಿ 27,663 ಶಾಲಾ ವಿದ್ಯಾರ್ಥಿಗಳು, 1,053 ಖಾಸಗಿ ಅಭ್ಯರ್ಥಿಗಳು, 1,632 ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟಾರೆ 30,348 ವಿದ್ಯಾರ್ಥಿಗಳು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಎದುರಿಸಲಿದ್ದಾರೆ.
ತಾಲೂಕುವಾರು ವಿವರ:
ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಶಾಲಾ ಅಭ್ಯರ್ಥಿಗಳು 5,505, ಖಾಸಗಿ ಅಭ್ಯರ್ಥಿಗಳು 163, ಪುನರಾವರ್ತಿತ ಅಭ್ಯರ್ಥಿಗಳು 455 ಒಟ್ಟು 6,123.
ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ಶಾಲಾ ಅಭ್ಯರ್ಥಿಗಳು 3,793, ಖಾಸಗಿ ಅಭ್ಯರ್ಥಿಗಳು 82, ಪುನರಾವರ್ತಿತ ಅಭ್ಯರ್ಥಿಗಳು 160, ಒಟ್ಟು 4,035.
ಮಂಗಳೂರು ಉತ್ತರ ವ್ಯಾಪ್ತಿಯಲ್ಲಿ ಶಾಲಾ ಅಭ್ಯರ್ಥಿಗಳು 5,119, ಖಾಸಗಿ ಅಭ್ಯರ್ಥಿಗಳು 390, ಪುನರಾವರ್ತಿತ ಅಭ್ಯರ್ಥಿಗಳು 301, ಒಟ್ಟು 5,810.
ಮಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿ ಶಾಲಾ ಅಭ್ಯರ್ಥಿಗಳು 4,952, ಖಾಸಗಿ ಅಭ್ಯರ್ಥಿಗಳು 139, ಪುನರಾವರ್ತಿತ ಅಭ್ಯರ್ಥಿಗಳು 361, ಒಟ್ಟು 5452.
ಮೂಡಬಿದ್ರೆ ತಾಲೂಕು ವ್ಯಾಪ್ತಿಯಲ್ಲಿ ಶಾಲಾ ಅಭ್ಯರ್ಥಿಗಳು 1,859, ಖಾಸಗಿ ಅಭ್ಯರ್ಥಿಗಳು 25, ಪುನರಾವರ್ತಿತ ಅಭ್ಯರ್ಥಿಗಳು 62, ಒಟ್ಟು 1,948.
ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ ಶಾಲಾ ಅಭ್ಯರ್ಥಿಗಳು 4,627, ಖಾಸಗಿ ಅಭ್ಯರ್ಥಿಗಳು 153, ಪುನರಾವರ್ತಿತ ಅಭ್ಯರ್ಥಿಗಳು 215, ಒಟ್ಟು 4995.
ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಶಾಲಾ ಅಭ್ಯರ್ಥಿಗಳು 1,808, ಖಾಸಗಿ ಅಭ್ಯರ್ಥಿಗಳು 99, ಪುನರಾವರ್ತಿತ ಅಭ್ಯರ್ಥಿಗಳು 78, ಒಟ್ಟು 1,985 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಪರೀಕ್ಷಾ ಕೇಂದ್ರಗಳು: ಜಿಲ್ಲೆಯ ಬಂಟ್ವಾಳದಲ್ಲಿ 17, ಬೆಳ್ತಂಗಡಿಯಲ್ಲಿ 13, ಮಂಗಳೂರು ಉತ್ತರ ವ್ಯಾಪ್ತಿಯಲ್ಲಿ 18, ಮಂಗಳೂರು ದಕ್ಷಿಣ ಭಾಗದಲ್ಲಿ 16, ಮೂಡಬಿದ್ರೆಯಲ್ಲಿ 5, ಪುತ್ತೂರು 13 ಹಾಗೂ ಸುಳ್ಯ ವಲಯದಲ್ಲಿ 6 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 88 ಪರೀಕ್ಷಾ ಕೇಂದ್ರಗಳಿವೆ.
ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳ ವಿವರ: ಮುಖ್ಯ ಅಧೀಕ್ಷಕರು 88, ಉಪಮುಖ್ಯ ಅಧೀಕ್ಷಕರು 42, ಕಸ್ಟೋಡಿಯನ್ 88, ಸ್ಥಾನಿಕ ಜಾಗೃತ ದಳದ ಕಾರ್ಯಕ್ಕೆ ಅಧಿಕಾರಿಗಳು 88, ಮೊಬೈಲ್ ಪೋನು ಸ್ವಾದಿನಾಧಿಕಾರಿಗಳು 88, ಮಾರ್ಗಾಧಿಕಾರಿ 30, ಕೊಠಡಿ ಮೇಲ್ವಿಚಾರಕರಾಗಿ 1,588 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ತೆಗೆದುಕೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳಿವು:

ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಅಭ್ಯರ್ಥಿಗಳ ಅನುಕೂಲಕ್ಕಾಗಿ ಸೂಕ್ತ ಸೂಚನಾ ಫಲಕಗಳ ವ್ಯವಸ್ಥೆ ಮಾಡಲಾಗಿದೆ, ಅಭ್ಯರ್ಥಿಗಳಿಗೆ ಅಗತ್ಯ ಅಸನದ ವ್ಯವಸ್ಥೆ ಮಾಡಲಾಗಿದ್ದು, ಕುಡಿಯುವ ನೀರು, ಶೌಚಾಲಯ ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಮೊಬೈಲ್ ಸ್ವಾಧೀನಾಧಿಕಾರಿಯನ್ನು ನೇಮಕ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಪ್ರಶ್ನಾಪತ್ರಿಕೆ ಅಭಿರಕ್ಷಕರುಗಳ ಸಭೆಯನ್ನು ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆ), ಶಾಲಾ ಶಿಕ್ಷಣ ಇಲಾಖೆ ಮೂಲಕ ಆಯೋಜಿಸಲಾಗಿದೆ. ಪ್ರಶ್ನೆ ಪತ್ರಿಕೆ ಬಂಡಲ್ ಗಳನ್ನು ತಾಲೂಕು/ಜಿಲ್ಲಾ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸಾಗಾಟ ಮಾಡುವ ವಾಹನಕ್ಕೆ ಪೆÇಲೀಸ್ ಎಸ್ಕಾರ್ಟ್ ಗಳನ್ನು ನಿಯೋಜಿಸಲಾಗುತ್ತಿದೆ.
ಉಪ ಖಜಾನಾಧಿಕಾರಿಗಳಿಗೆ ಪರೀಕ್ಷಾ ದಿನಗಳಂದು ಪ್ರಶ್ನೆ ಪತ್ರಿಕೆಗಳನ್ನು ಹೊರತೆಗೆಯುವ ಬಗ್ಗೆ ನಿರ್ದೇಶನವಿದ್ದು, ಜಿಲ್ಲಾ ಮತ್ತು ತಾಲೂಕು ಖಜಾನಾಧಿಕಾರಿಗಳು ಆಯಾ ಪರೀಕ್ಷಾ ದಿನದಂದು ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳನ್ನು ಸ್ವೀಕರಿಸಿ ಜಿಲ್ಲಾ ಕೇಂದ್ರದ (ಕಫಿತಾನಿಯೋ ಪ್ರೌಢ ಶಾಲೆ, ಪಂಪ್ ವೆಲ್) ಭದ್ರತಾ ಕೊಠಡಿಗೆ ಸುರಕ್ಷಿತವಾಗಿ ಸಾಗಿಸಲಾಗುವುದು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ್ ಗೋಯಲ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ ಕುಮಾರ್, ಸಹಾಯಕ ಆಯುಕ್ತರಾದ ಹರ್ಷವರ್ಧನ್, ಜುಬಿನ್ ಮೊಹಪಾತ್ರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೆಂಕಟೇಶ್ ಎಸ್. ಪಟಗಾರ್, ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್ ಅಧಿಕಾರಿಗಳು ಹಾಗೂ ಸಂಬಂಧಿಸಿದವರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles